ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯ ಮಟ್ಟದ ಯುವಜನೋತ್ಸವ ಪ್ರಯುಕ್ತ ಜನವರಿ 3ಕ್ಕೆ ಬೃಹತ್ ಜಾಥಾ: ಸಾವಿರಾರು ವಿದ್ಯಾರ್ಥಿಗಳು ಭಾಗಿ

On: December 31, 2024 8:35 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:31-12-2024

ದಾವಣಗೆರೆ: ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಜನವರಿ 5 ಮತ್ತು 6 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಗಳು ನಡೆಯಲಿದ್ದು ಇದರ ಅಂಗವಾಗಿ ಯುವ ಜನರಲ್ಲಿ ಜಾಗೃತಿ ಮೂಡಿಸಲು ಜನವರಿ 3 ರಂದು ಯುವ ಸಮೂಹದಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.

ಅವರು ದೂಡಾ ಕಚೇರಿಯಲ್ಲಿ ಯುವಜನೋತ್ಸವ ಕಾರ್ಯಕ್ರಮ ಅಂಗವಾಗಿ ವ್ಯಾಪಕ ಜಾಗೃತಿ ಮೂಡಿಸಲು ಸರ್ಕಾರಿ, ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಏರ್ಪಡಿಸಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವಜನೋತ್ಸವ ಸಾಂಸ್ಕೃತಿಕ ಹಬ್ಬ, ಯುವ ಜನತೆ ದೇಶದ ಆಸ್ತಿಯಾಗಿದ್ದು ಯುವಕ, ಯುವತಿಯರಲ್ಲಿ ಗುಣಾತ್ಮಕ ಚಿಂತನೆಗಳನ್ನು ಬಿತ್ತಬೇಕಿದೆ. ಸಕಾರಾತ್ಮಕ ಚಿಂತನೆಗಳು ಯುವಜನೋತ್ಸವಗಳಿಂದ ಮೂಡಿ ಬರಲಿದ್ದು ಯುವ ಜನತೆಯನ್ನು ಇದರಲ್ಲಿ ತೊಡಗಿಸುವಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಪದವಿ ಪೂರ್ವ ಕಾಲೇಜುಗಳ ಪಾತ್ರ ಬಹಳ ಪ್ರಾಮುಖವಾಗಿದೆ ಎಂದರು.

ಜನವರಿ 3 ರಂದು ಬೆಳಗ್ಗೆ 8 ರಿಂದ ಗುಂಡಿ ವೃತ್ತದ ಬಳಿಯಿಂದ ಜಾಥಾ ನಡೆಯಲಿದ್ದು ಪ್ರತಿಯೊಂದು ಕಾಲೇಜಿನಿಂದ ಕನಿಷ್ಠ 100ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗುವಂತೆ ಮಾಡಬೇಕಾಗಿದೆ. ಜೊತೆಗೆ ಒಂದೊಂದು ಕಾಲೇಜಿನಿಂದ ಪ್ರತ್ಯೇಕವಾಗಿ ವಿಷಯಾಧಾರಿತವಾಗಿ ಘೋಷವಾಕ್ಯಗಳ ಫಲಕಗಳನ್ನು ಸಿದ್ದಪಡಿಸಿಕೊಂಡು ಜಾಥಾದಲ್ಲಿ ಭಾಗವಹಿಸಲು ಮತ್ತು ವಿಶೇಷ ವೇಷಭೂಷಣದಲ್ಲಿಯು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದರು.

ಜಾಥಾ ಮಾರ್ಗ:

ಗುಂಡಿ ವೃತ್ತದಿಂದ ವಿದ್ಯಾರ್ಥಿಭವನ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ, ಪಾಲಿಕೆ ಮುಂಭಾಗದಿಂದ ಎವಿಕೆ ಕಾಲೇಜು ರಸ್ತೆ ಮೂಲಕ ಮೋತಿ ವೀರಪ್ಪ ಕಾಲೇಜಿನ ವರೆಗೆ ಆಗಮಿಸಿ ಮುಕ್ತಾಯವಾಗಲಿದೆ.

ಆಯಾ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದು ಹೋಗುವ ಜವಾಬ್ದಾರಿ ನಿರ್ವಹಿಸಬೇಕೆಂದರು. ಈ ವೇಳೆ ದೂಡಾ ಆಯುಕ್ತ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾದ ಹುಲಿಮನಿ ತಿಮ್ಮಣ್ಣ, ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ, ಯುವ ಪ್ರಶಸ್ತಿ ಪುರಸ್ಕೃತರಾದ ಮಾಗನಹಳ್ಳಿ ಮಂಜುನಾಥ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment