SUDDIKSHANA KANNADA NEWS/ DAVANAGERE/ DATE:17-03-2024
ಬೆಂಗಳೂರು: ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ಬಂಡಾಯದ ವಿಚಾರ ಕುರಿತಂತೆ ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯದ ಜನರೇ ಉತ್ತರ ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ. ಎಸ್. ಈಶ್ವರಪ್ಪ ಅವರ ಜೊತೆ ಮಾತನಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಶಿವಮೊಗ್ಗಕ್ಕೆ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ
ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಟಿಕೆಟ್ ಘೋಷಣೆ ಬಳಿಕ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಕುರಿತಂತೆ ರಾಜ್ಯದ ಜನರು ಉತ್ತರ ನೀಡುತ್ತಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ರಾಜ್ಯದ ಜನರು ಮನ್ನಣೆ ನೀಡಲಿದ್ದಾರೆ ಎಂದರು.
ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸ:
ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ
ಎಂದು ಹೇಳಿದ್ದಾರೆ.
ರಾಷ್ಟ್ರೀಯ ನಾಯಕರು ಈಶ್ವರಪ್ಪ ನವರ ಮನವೊಲಿಕೆ ಮಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕ್ಷೇತ್ರ ಬದಲಾವಣೆ ಆಗುತ್ತವೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರೀಯಿಸಿದ ಅವರು, ರಮೇಶ್ ಜಾರಕಿಹೊಳಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿ ಇರಬಹುದು. ಕ್ಷೇತ್ರ ಬದಲಾವಣೆ ಕುರಿತು ಜಾರಕಿಹೊಳಿ ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ ಎಂದು ಹೇಳಿದರು.
ಇವತ್ತು ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇವೆ. ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರಿಗೂ ಅಹ್ವಾನ ಕೊಡಲಾಗಿದೆ. ಈ ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಜೋಶಿ ಅವರಿಗೆ ಕಳೆದ ಬಾರಿಗಿಂತ ಹೆಚ್ಚಿನ ಲೀಡ್ ಕೊಡಿಸುತ್ತೇವೆ. ನಾಳೆ ಹಾವೇರಿ ಲೋಕಸಭೆ ವ್ಯಾಪ್ತಿಯ
ಗದಗ ಜಿಲ್ಲೆಗೆ ಭೇಟಿ ನೀಡಲಿದ್ದೇನೆ ಎಂದು ಹೇಳಿದರು.