SUDDIKSHANA KANNADA NEWS\ DATE:25-10-2023
ಗಿರೀಶ್ ಕೆ ಎಂ
ಜಾಗತಿಕ ಮಾರುಕಟ್ಟೆಯಲ್ಲಿ ಕವಿದಿರುವ ಕಾರ್ಮೋಡ, ಹೆಚ್ಚುತ್ತಿರುವ US ಬಾಂಡ್ ಇಲ್ಡ್, ಮುಂದುವರೆದಿರುವ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಮರ ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರ ಹೆಚ್ಚು ಮಾರಾಟದ ಕಾರಣ ಭಾರತೀಯ ಷೇರುಪೇಟೆ ನಕಾರಾತ್ಮಕವಾಗಿ ಅಂತ್ಯ ಗೊಳ್ಳಲು ಕಾರಣವಾಯಿತು.
ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ -159.60 (-0.83%) ಅಂಕ ಇಳಿಕೆ ಕಂಡು19,122.15 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ -522.82 (-0.80%)
ಅಂಕ ಇಳಿಕೆ ಕಂಡು 64,049.06 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.
ಏರಿಕೆ ಕಂಡ ಷೇರುಗಳು:
ಇಂದು ನಿಫ್ಟಿಯಲ್ಲಿ TATASTEEL, COALINDIA,HINDALCO,TATACONSUM,SBINಷೇರುಗಳು ಜಿಗಿತ ಕಂಡವು.
ಇಳಿಕೆ ಕಂಡ ಷೇರುಗಳು:
ನಿಫ್ಟಿಯಲ್ಲಿ APOLLOHOSP, ADANIENT, SBILIFE, CIPLA, EICHERMOT ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.
ಕರೆನ್ಸಿ ವಹಿವಾಟು:
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 83.17 ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.
FII ಮತ್ತು DII ನಗದು ವಹಿವಾಟು ವಿವರ:
ಇಂದಿನ ಮಾರುಕಟ್ಟೆಯ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ.-4,236.60 ಕೋಟಿ ನಿವ್ವಳ ಮಾರಾಟ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.3,569.36 ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.