SUDDIKSHANA KANNADA NEWS/ DAVANAGERE/ DATE:07-02-2024
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಹಣಕಾಸು ನೀತಿ ಸಮಿತಿ (ಎಂ ಪಿ ಸಿ) ಸಭೆ ಆರಂಭವಾಗಿದೆ. ಇದೇ ಫೆ 8 ರಂದು ತೀರ್ಮಾನ ಹೊರಬೀಳಲಿದ್ದು, ರೆಪೋ ದರ ಯಥಾ ಸ್ಥಿತಿ ಇರಲಿದೆ ಎಂದು ಅಂದಾಜಿಸಲಾಗಿದೆ. ಇದು ಹೂಡಿಕೆದಾರರಿಗೆ ಆಶಾದಾಯಕ ಎನಿಸಿದ್ದು, ಸೂಚ್ಯಂಕಗಳು ಏರಿಕೆ ದಾಖಲಿಸಿವೆ.
ಮಂಗಳವಾರ ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ (ಎನ್ಎಸ್ಇ) ನಿಫ್ಟಿ 157.71 (0.72%) ಅಂಕ ಏರಿಕೆ ಕಂಡು 21,929.40 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 454.67 (0.63%) ಅಂಕ ಏರಿಕೆ ಕಂಡು 72,186.09 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.
ಏರಿಕೆ ಕಂಡ ಷೇರುಗಳು
ನಿಫ್ಟಿಯಲ್ಲಿ BPCL, HDFCLIFE, HCLTECH,TCS,MARUTI ಷೇರುಗಳು ಜಿಗಿತ ಕಂಡವು.
ಇಳಿಕೆ ಕಂಡ ಷೇರುಗಳು
ನಿಫ್ಟಿಯಲ್ಲಿ POWERGRID, BRITANNIA, INDUSINDBK, ITC, GRASIM ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.
FII ಮತ್ತು DII ನಗದು ವಹಿವಾಟು ವಿವರ
ಮಾರುಕಟ್ಟೆ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ.92.52 ಕೋಟಿ ನಿವ್ವಳ ಖರೀದಿ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.1,096.26 ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.
ಕರೆನ್ಸಿ ವಹಿವಾಟು
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 83.05 ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.