ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಶಸ್ತ್ರ ಮೀಸಲು ಪಡೆ ಕಾನ್ ಸ್ಟೇಬಲ್…. ಯಾಕೆ…?

On: February 14, 2024 10:23 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE: 14-02-2024

ದಾವಣಗೆರೆ: ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂನಲ್ಲಿ ಸಶಸ್ತ್ರ ಮೀಸಲು ಪಡೆಯ ಕಾನ್ ಸ್ಟೇಬಲ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ವಾಸಿಯಾದ ಗುರುಮೂರ್ತಿ (34) ಎಂದು ಗುರುತಿಸಲಾಗಿದೆ. 2011-12 ರ ಬ್ಯಾಚ್ ನವರಾಗಿದ್ದ ಗುರುಮೂರ್ತಿ 21ನೇ ವಯಸ್ಸಿಗೆ ಕೆಲಸಕ್ಕೆ ಸೇರಿದ್ದರು. ಆದ್ರೆ, ಈಗ ಆತ್ಮಹತ್ಯೆ ಮಾಡಿಕೊಂಡಿರುವುದು ಯಾಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ಗುಂಡು ಹಾರಿಸಿಕೊಂಡು ಕೆಳಗಡೆ ಬಿದ್ದ ಗುರುಮೂರ್ತಿ ಅವರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ರಕ್ತದ ಮಡುವಿನಲ್ಲಿದ್ದ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಇವಿಎಂ ಯಂತ್ರಗಳ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆ ಐಜಿಪಿ ತ್ಯಾಗರಾಜನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment