ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಿರುತೆರೆ ನಟಿ ಪವಿತ್ರಾ ಜಯರಾ ಸಾವಿನ ಬೆನ್ನಲ್ಲೇ ಆಕೆಯ ಗೆಳೆಯ ನೇಣು ಬಿಗಿದು ಆತ್ಮಹತ್ಯೆಗೆ ಶರಣು

On: May 18, 2024 6:12 PM
Follow Us:
---Advertisement---

ಹೈದರಾಬಾದ್: ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ಕಿರುತೆರೆ ನಟಿ ಪವಿತ್ರಾ ಜಯರಾಂ ಪ್ರಕರಣದ ಬೆನ್ನಲ್ಲೇ ಇದೀಗ ಆಕೆಯ ಸ್ನೇಹಿತ ಚಂದ್ರಕಾಂತ್ ನೇಣಿಗೆ ಶರಣಾಗಿದ್ದಾರೆ. ಕಿರುತೆರೆ ಲೋಕದಲ್ಲಿ ಶಾಂಕಿಂಗ್ ಸುದ್ದಿಯಾಗಿದೆ.

ಮೇ12 ರಂದು ಆಂಧ್ರದ ಕಾರು ಮಹೆಬೂಬ್‌ನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಟಿ ಪವಿತ್ರಾ ಸಾವನಪ್ಪಿದ್ದರು. ಈ ಅಪಘಾತದಲ್ಲಿ ಕಿರುತೆರೆ ನಟ ಚಂದ್ರಕಾಂತ್ ಕೂಡ ಗಾಯಗೊಂಡಿದ್ದರು. ಪವಿತ್ರಾ ಅವರ ಅಂತ್ಯಕ್ರಿಯೆಗೆ ಗಾಯ ಆಗಿದ್ದರೂ ಚಂದು ಬಂದಿದ್ದರು. ಈ ವೇಳೆ ತನ್ನ ಸ್ನೇಹಿತೆಯನ್ನು ಕಳೆದುಕೊಂಡ ದುಃಖದಲ್ಲಿ ಭಾವುಕರಾಗಿ ಮಾತನಾಡಿದ್ದರು.

ಶುಕ್ರವಾರ ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ತನ್ನ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಚಂದ್ರಕಾಂತ್ ಹಾಗೂ ಪವಿತ್ರ ರಿಲೇಷನ್ ಶಿಫ್ ನಲ್ಲಿದ್ದರು ಎಂದು ಹೇಳಲಾಗಿದ್ದು, ಇದೇ ನೋವಿನಲ್ಲಿ ಚಂದ್ರಕಾಂತ್ ಆತ್ಮಹತ್ಯೆಗೆ ಶರಣಾಗಿರುವ ಸಾದ್ಯತೆ ಇದೆ ಎಂದು ಹೇಳಲಾಗಿದೆ. ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿರುವ ಇವರು, 2015 ರಲ್ಲಿ ಶಿಲ್ಪಾ ಎನ್ನುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಎರಡು ಮಕ್ಕಳಿದ್ದಾರೆ.

Join WhatsApp

Join Now

Join Telegram

Join Now

Leave a Comment