SUDDIKSHANA KANNADA NEWS/ DAVANAGERE/ DATE:11-04-2025
ದಾವಣಗೆರೆ: ನಗರದ ಎಸ್ ಪಿಎಸ್ ನಗರದಲ್ಲಿ ತಂದೆಯೇ ಇಬ್ಬರು ಮಕ್ಕಳನ್ನು ಸಾಯಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ನಡೆದಿದೆ.
ಶ್ರೀಜಯ್ (3), ಸಿಂಧುಶ್ರೀ (4) ಸಾಯಿಸಿ ತಂದೆ ಉದಯ್ (35) ಆತ್ಮಹತ್ಯೆಗೆ ಶರಣಾದವರು. ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ಕಳೆದ ಕೆಲ ತಿಂಗಳುಗಳ ಹಿಂದೆಯಷ್ಟೇ ಸಾವು ಕಂಡಿದ್ದರು. ಪತ್ನಿ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ದ ಉದಯ್ ಸಾಕಷ್ಟು ಕುಗ್ಗಿ ಹೋಗಿದ್ದರು.
ಗೋಡೆಯ ಮೇಲೆ ಐ ಲವ್ ಯು ಹೇಮಾ ಎಂದು ಪತ್ನಿಯ ಹೆಸರು ಬರೆದಿದ್ದ ಉದಯ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೆರೆ ನಿವಾಸಿ ಹೇಮಾ ಜೊತೆ ಕಳೆದ ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಪರಸ್ಪರ ಪ್ರೀತಿಸಿ ವಿವಾಹವಾಗಿದ್ದ ಇಬ್ಬರು ಚೆನ್ನಾಗಿಯೇ ಇದ್ದರು. ದಾಂಪತ್ಯಕ್ಕೆ ಮುದ್ದಿನ ಇಬ್ಬರು ಮಕ್ಕಳಿದ್ದರು. ಓರ್ವ ಪುತ್ರ ಹಾಗೂ ಓರ್ವ ಪುತ್ರಿ. ಆದ್ರೆ. ಪ್ರೀತಿಸಿ ಮದುವೆಯಾದ ಪತ್ನಿ ಅನಾರೋಗ್ಯಕ್ಕೆ ತುತ್ತಾಗಿ ಎಂಟು ತಿಂಗಳ ಹಿಂದೆ ಸಾವನ್ನಪ್ಪಿದ್ದರಿಂದ ಮನನೊಂದು ಉದಯ್ ಈ ಕೃತ್ಯ ಎಸಗಿದ್ದಾನೆ.
ಕೊನೆಗೆ ನೋವು ಕಡೆದುಕೊಳ್ಳಲಾಗದೇ ಸಾಯುವ ನಿರ್ಧಾರಕ್ಕೆ ಬಂದಿದ್ದಾರೆ. ಮಕ್ಕಳನ್ನ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಶ್ವಾನ ದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.