Site icon Kannada News-suddikshana

ದಾವಣಗೆರೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆಗೆ ಶರಣು!

Davanagere

SUDDIKSHANA KANNADA NEWS/ DAVANAGERE/DATE:20_08_2025

ದಾವಣಗೆರೆ: ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬಲಿಯಾಗುತ್ತಿರುವುದು ನಿಲ್ಲುತ್ತಿಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳ ಆರೋಪ ಕೇಳಿ ಬಂದಿದ್ದು, ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಹಳೇ ಕುಂದುವಾಡ ಗ್ರಾಮದಲ್ಲಿ ನಡೆದಿದೆ.

READ ALSO THIS STORY: “ನಾವು ಧರ್ಮಸ್ಥಳದೊಂದಿಗೆ ಇದ್ದೇವೆ”: ಸಾವಿರಾರು ಸದ್ಭಕ್ತರ ಒಕ್ಕೊರಲ ಸಂದೇಶ!

ಮಹಾದೇವಿ ಎಂ. (32) ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ‌ ಬೇಸತ್ತು ಸಾವನ್ನಪ್ಪಿದ ಮಹಿಳೆ. ವಿವಿಧ ಸಂಘ ಹಾಗೂ ಮೈಕ್ರೋ ಫೈನಾನ್ಸ್ ಗಳಲ್ಲಿ 3 ಲಕ್ಷ ರೂಪಾಯಿ ಸಾಲ ಪಡೆದಿದ್ದ ಮಹಿಳೆ ಆಕೆ ಮತ್ತು ಆಕೆಯ ಪತಿ ಟೆಂಪೋ ಓಡಿಸಿ, ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಈ ತಿಂಗಳು ಕಂತು ಕಟ್ಟಲು 15 ದಿನ ತಡವಾಗಿದ್ದಕ್ಕೆ‌ ಮನೆ ಮುಂದೆ ಆಗಮಿಸಿ ಫೈನಾನ್ಸ್ ಸಿಬ್ಬಂದಿ ಅಮಾನವೀಯವಾಗಿ ನಿಂದನೆ ಮಾಡಿದ್ದರಿಂದ ಬೇಸತ್ತು ಮರ್ಯಾದೆಗೆ ಅಂಜಿ ಮನೆಯಲ್ಲಿ‌ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ದ ಕ್ರಮಕ್ಕೆ ಮೃತಳ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹ ರವಾನೆಯಾಗಿದ್ದು, ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Exit mobile version