ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ಕಬಡಿ, ವಾಲಿಬಾಲ್ ತರಬೇತಿ

On: April 8, 2025 12:10 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:08-04-2025

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.

ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಬೇಸಿಗೆ ವಾಲಿಬಾಲ್ ತರಬೇತಿ:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.

ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment