ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆಸರೆ: ವಿಜ್ಞಾನ ನಾಟಕ ಸ್ಪರ್ಧೆ ರದ್ದಾದರೂ ದೆಹಲಿ ಪ್ರವಾಸ ಭಾಗ್ಯ

On: December 29, 2024 3:50 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:29-12-2024

ದಾವಣಗೆರೆ: ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಆಸರೆಯಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಕ್ಕಳಿಗೆ ನವದೆಹಲಿ ಪ್ರವಾಸ ಭಾಗ್ಯ ಸಿಕ್ಕಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಾವಿನಕಟ್ಟೆ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ರಾಷ್ಟ್ರೀಯ ವಿಜ್ಞಾನ ನಾಟಕ ಸ್ಪರ್ಧೆಗೆ ಆಯ್ಕೆಯಾಗಿ ದೆಹಲಿಗೆ ತೆರಳಿದ್ದರು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ಸ್ಪರ್ಧೆ ರದ್ದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಯಿತು.

ಈ ಬಗ್ಗೆ ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಾವಿನಕಟ್ಟೆ ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆ ಸಂಸತ್ ವೀಕ್ಷಣೆಗೆ ಸಂಸದರು ನಿನ್ನೆ ಅವಕಾಶ ಕಲ್ಪಿಸಿದರು.

ಇಂದು ಮಕ್ಕಳಿಗೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಲು ವೈಯಕ್ತಿಕವಾಗಿ ಸಹಾಯ ಮಾಡಿದರು.

ಇದರಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಾವಿನಕಟ್ಟೆ ಗ್ರಾಮದ ಸರ್ಕಾರಿ ಶಾಲೆ ಮಕ್ಕಳು ಸ್ಪರ್ಧೆ ರದ್ದಾದರೂ ಸಹ ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರಿಂದ ದೆಹಲಿ ಪ್ರವಾಸ ಸಾರ್ಥಕಭಾವ ಮೂಡಿಸಿತು.

ಈ ಬಗ್ಗೆ ಚನ್ನಗಿರಿ ಶಾಸಕರು ತಮ್ಮ ಫೇಸ್‍ಬುಕ್ ಅಕೌಂಟ್‍ನಲ್ಲಿ ಬರೆದುಕೊಂಡಿದ್ದು, ಚನ್ನಗಿರಿ ಕ್ಷೇತ್ರ ಮತ್ತು ವೈಯಕ್ತಿಕವಾಗಿ ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment