ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸುಪ್ರೀಂಕೋರ್ಟ್ ಹಿರಿಯ ನ್ಯಾಯವಾದಿ ಫಾಲಿ ಎಸ್. ನಾರಿಮನ್ ನಿಧನ: ಸಿಎಂ ಸೇರಿ ಗಣ್ಯರ ಕಂಬನಿ

On: February 21, 2024 11:22 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-02-2024

ಬೆಂಗಳೂರು: ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 95 ವರ್ಷ ವಯಸ್ಸಾಗಿತ್ತು.

ಹಿರಿಯ ನ್ಯಾಯವಾದಿ ಫಾಲಿ ಎಸ್. ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೇಶದ ಅತ್ಯಂತ ಶ್ರೇಷ್ಠ ನದಿ ನೀರಿನ ವಿವಾದ ತಜ್ಞರಾಗಿದ್ದ ನಾರಿಮನ್ ಅವರು ದಶಕಗಳ ಕಾಲ ಕರ್ನಾಟಕವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿನಿಧಿಸಿದ್ದರು. ಕೃಷ್ಞಾ, ಕಾವೇರಿ ನದಿಗಳ ಜಲಹಂಚಿಕೆ ವಿವಾದಗಳಲ್ಲಿ ಕರ್ನಾಟಕದ ರೈತರಿಗೆ ನ್ಯಾಯ ಸಿಕ್ಕಿದ್ದರೆ ಅದರಲ್ಲಿ ನಾರಿಮನ್ ಅವರ ದೊಡ್ಡ ಕೊಡುಗೆ ಇದೆ. ಸುಪ್ರೀಂಕೋರ್ಟ್‌ನ ನ್ಯಾಯಪೀಠದ ಗೌರವಾದರಗಳಿಗೆ ಪಾತ್ರರಾಗಿದ್ದ ನಾರಿಮನ್ ಅವರಂತಹವರು ನ್ಯಾಯವಾದಿಯಾಗಿ ಸಿಕ್ಕಿದ್ದು ಕರ್ನಾಟಕದ ಪಾಲಿನ ಭಾಗ್ಯವಾಗಿತ್ತು. ವಕೀಲಿ ವೃತ್ತಿಯಿಂದ ಬಂದ ನನಗೆ ಅವರ ಬಗ್ಗೆ ವಿಶೇಷವಾದ ಅಭಿಮಾನ ಇತ್ತು ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ದೇಶದ ಖ್ಯಾತ ಮತ್ತು ಪ್ರತಿಭಾವಂತ ವಕೀಲರಾಗಿದ್ದ ನಾರಿಮನ್ ಅವರ ಜೊತೆಗೆ ನನ್ನದು ದೀರ್ಘಕಾಲದ ಒಡನಾಟ. ನೀರಾವರಿಗೆ ಸಂಬಂಧಿಸಿದ ಎಂತಹ ಜಟಿಲ ಸಮಸ್ಯೆಗಳು ಎದುರಾದರೂ ಉದ್ವೇಗಗೊಳ್ಳದೆ ಪರಿಹಾರದ ಕ್ರಮಗಳನ್ನು ಸೂಚಿಸುತ್ತಿದ್ದ ಅವರ ಕಸುಬುಗಾರಿಕೆ ಅನನ್ಯವಾದುದು ಎಂದು ಬಣ್ಣಿಸಿದ್ದಾರೆ.

ಆಂತರಿಕವಾದ ಸಭೆಯಲ್ಲಿ ಅವರು ನೀಡುತ್ತಿದ್ದ ಸಲಹೆಗಳು ಮತ್ತು ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದ ವಾದಗಳಿಂದ ನೀರಾವರಿ ವಿಷಯದಲ್ಲಿ ನನ್ನ ಜ್ಞಾನವೃದ್ಧಿಯಾಗಿದೆ ಎನ್ನುವುದನ್ನು ಕೃತಜ್ಞತೆಯಿಂದ ನೆನಪು ಮಾಡಿಕೊಳ್ಳುತ್ತೇನೆ. ನಾರಿಮನ್ ಅವರ ಅಗಲಿಕೆಯ ದು:ಖದಲ್ಲಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು.‌ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಹೋಗಿ ಬನ್ನಿ ನಾರಿಮನ್ ಸಾಬ್, ಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಎಲ್ಲಾ ನಾಯಕರು ಸಂತಾಪ ಸೂಚಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment