ಬೆಂಗಳೂರು: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ದ ಆರೋಪದ ಮೇಲೆ ಪ್ರಜ್ವಲ್ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.
ಪ್ರಕರಣದ ಸಂಬಂಧ ಸೂರಜ್ ರೇವಣ್ಣ ಅವರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದರು. ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆಯಿತು. ಇಂದು ಮುಂಜಾನೆ 4 ಗಂಟೆವರೆಗೂ ಸೂರಜ್‌ನನ್ನು ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು ಎಂಬ ಮಾಹಿತಿ ತಿಳಿದು ಬಂದಿದೆ.