ನವದೆಹಲಿ: ಟಿ20 ಕ್ರಿಕೆಟ್ ವಿಶ್ವಕಪ್ ಗೆಲುವು ಪಡೆದ ಟೀಂ ಇಂಡಿಯಾ ಆಟಗಾರರನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶ್ಲಾಘಿಸಿದ್ದು, ಐತಿಹಾಸಿಕ ಸಾಧನೆ ಮಾಡಿದ ತಂಡಕ್ಕೆ125 ಕೋಟಿ ರೂ. ಬಹುಮಾನವನ್ನು ಘೋಷಿಸಿದ್ದಾರೆ.
ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ. ಬಹುಮಾನವನ್ನು ಘೋ ಷಿಸಲು ನನಗೆ ಸಂತೋಷವಾಗಿದೆ ಎಂದು ಜಯ್ ಶಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ರೋಹಿತ್ ಶರ್ಮಾ ಅವರ ಅಸಾಧಾರಣ ನಾಯಕತ್ವದಡಿ ಭಾರತ ತಂಡವು ಗಮನಾರ್ಹ ಸಾಧನೆ ಮಾಡಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲೇ ಇಡೀ ಟೂರ್ನಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯವಾಗಿ ಉಳಿದು ವಿಶ್ವಕಪ್ ಗೆದ್ದ ಮೊದಲ ತಂಡವಾಗಿದೆ ಎಂದು ಶಾ ಅಭಿನಂದಿಸಿದ್ದಾರೆ.
ಟೀಂ ಇಂಡಿಯಾ ಆಟಗಾರರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಭಾರತ ತಂಡ ಟೂರ್ನಿ ಯಲ್ಲಿ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀ ಡಾ ಮನೋ ಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು’ ಎಂದು ಹೇಳಿದ್ದಾರೆ.
ಬಾರ್ಬ ಡೋ ಸ್ನ ಬ್ರಿಜ್ಟೌನ್ನಲ್ಲಿ ನಡೆದ ಫೈನಲ್‌ನಲ್ಲಿ ರೋ ಹಿತ್ ಶರ್ಮಾ ನಾಯಕತ್ವದ ಭಾರತ ತಂ ಡವು ದಕ್ಷಿಣ ಆಫ್ರಿಕಾವನ್ನು 7ರನ್‌ಗಳಿಂದ ಮಣಿಸುವ ಮೂಲಕ 17 ವರ್ಷ ಗಳ ಬಳಿಕ ಎರಡನೇ ಬಾರಿಗೆ ಚಾಂಪಿಯನ್ ಮುಡಿಗೇರಿಸಿಕೊಂಡಿದೆ.