Site icon Kannada News-suddikshana

T20 WORLD CUP FINAL 2024 : ಇಂದು ಭಾರತ, ಸೌತ್ ಆಫ್ರಿಕಾ ಮುಖಾಮುಖಿ

ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದ್ದು, ಇಂದು ಜೂನ್.29 ನಡೆಯಲಿರುವ ಅಂತಿಮ ಆಟದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ.

ಈ ಪಂದ್ಯ ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ. ಟೀಮ್ ಇಂಡಿಯಾ ಆಡಿರುವ 7 ಪಂದ್ಯಗಳಲ್ಲೂ ವಿಜಯ ಸಾಧಿಸಿದರೆ,  ಸೌತ್ ಆಫ್ರಿಕಾ 8 ಮ್ಯಾಚ್​ಗಳನ್ನು ಗೆದ್ದು ಅಂತಿಮ ಸುತ್ತಿಗೆ ಪ್ರವೇಶಿಸಿದೆ. ಹೀಗಾಗಿ ಫೈನಲ್​ನಲ್ಲಿ ಭರ್ಜರಿ ಪೈಪೋಟಿ ಕಂಡು ಬರುವ ನಿರೀಕ್ಷೆಯಿದೆ. ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 13 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪ್ರಾರಂಭವಾಗಲಿದೆ. ಭಾರತ ತಂಡದಿಂದ ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಇವರುಗಳು ಆಡಳಿದ್ದಾರೆ. ಸೌತ್ ಆಫ್ರಿಕಾ ತಂಡದಿಂದ  ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಝ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಕ್ ನೋಕಿಯಾ, ತಬ್ರೇಝ್ ಶಮ್ಸಿ, ಒಟ್ನೀಲ್ ಬಾರ್ಟ್‌ಮನ್, ಗೆರಾಲ್ಡ್ ಕೋಯಟ್ಝಿ, ಜಾರ್ನ್ ಫಾರ್ಚುಯಿನ್, ರಯಾನ್ ರಿಕೆಲ್ಟನ್ ಇವರು ಆಡಳಿದ್ದಾರೆ.

Exit mobile version