Site icon Kannada News-suddikshana

T2O WORLDCUP 2024: ವಿಶ್ವಕಪ್ ಗೆಲುವಿನ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ

ಬಾರ್ಬಡೋಸ್: ಅಸಂಖ್ಯ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಪಂದ್ಯ ಮುಗಿದ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ವಿರಾಟ್ ಕೊಹ್ಲಿ ತಮ್ಮ ನಿವೃತ್ತಿಯ ಬಗ್ಗೆ ಖಚಿತಪಡಿಸಿದರು. ನಾಯಕ ರೋಹಿತ್ ಶರ್ಮಾ ಅವರೂ ಬಳಿಕ ತನ್ನ ಟಿ20 ನಿವೃತ್ತಿಯನ್ನು ಘೋಷಿಸಿದರು.

ಇದು ನನ್ನ ಕೊನೆಯ ಟಿ20 ವಿಶ್ವಕಪ್. ಇದು ಭಾರತದ ಪರ ನನ್ನ ಟಿ20 ಪಂದ್ಯ. ಮುಂದಿನ ತಲೆಮಾರು ಜವಾಬ್ದಾರಿ ಹೊತ್ತು ಕೊಳ್ಳಲು ಇದು ಸಕಾಲ ಎಂದು ಕೊಹ್ಲಿ ಪಂದ್ಯದ ಬಳಿಕ ಹೇಳಿದ್ದಾರೆ.

Exit mobile version