ದಾವಣಗೆರೆ: ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದಿಂದ ವಿನೋಬ ನಗರದ 1ನೇ ಮುಖ್ಯರಸ್ತೆ, 17ನೇ ತಿರುವಿನಲ್ಲಿರುವ ಶ್ರೀಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ಮುಂಬರುವ ಆಗಸ್ಟ್ 17ರಂದು ಮಡಿವಾಳ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 31 ಆಗಿರುತ್ತದೆ ಎಂದು ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ಜಿಲ್ಲಾಧ್ಯಕ್ಷ ಎಂ.ನಾಗೇಂದ್ರಪ್ಪ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಸಂವಿಧಾನ ಬದಲಾವಣೆ ಮಾಡಲು ಮುಂದಾದ್ರೆ ನೀವು ಉಳಿಯಲ್ಲ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್!
ಆಗಸ್ಟ್ 17ರಂದು ಭಾನುವಾರ ವಿನೋಬಾ ನಗರದ ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರ ಸಮಕ್ಷಮದಲ್ಲಿ ಮಡಿವಾಳ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಆದ್ದರಿಂದ 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.70ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಜುಲೈ 31ರೊಳಗೆ ತಮ್ಮ ಕೈ ಬರಹದ ಅರ್ಜಿಗಳನ್ನು ಶ್ರೀ ಮಡಿವಾಳ ಮಾಚಿದೇವ ಸಮುದಾಯ ಭವನ, 1ನೇ ಮುಖ್ಯ ರಸ್ತೆ, 17ನೇ ತಿರುವು ವಿನೋಬಾ ನಗರ, ದಾವಣಗೆರೆ ಇಲ್ಲಿಗೆ ಖುದ್ದಾಗಿ ಇಲ್ಲಿಗೆ ತಲುಪಿಸಬೇಕು.
ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ ಅಂಕಪಟ್ಟಿ, ಟಿಸಿ, ಜಾತಿ ಪ್ರಮಾಣ ಪತ್ರ ಹಾಗೂ 2 ಪಾಸ್‌ಫೋರ್ಟ್ ಸೈಜಿನ ಭಾವಚಿತ್ರಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕೆಂದು ಮಡಿವಾಳ ಸಮಾಜದ ಪದಾಧಿಕಾರಿಗಳು ತಿಳಿಸಿದ್ದಾರೆ.