Home ಕ್ರೈಂ ನ್ಯೂಸ್ ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 23ಕ್ಕೂ ಹೆಚ್ಚು ಕಾರ್ಮಿಕರ ಬಲಿ, ಹಲವರಿಗೆ ಗಂಭೀರ ಗಾಯ
ಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 23ಕ್ಕೂ ಹೆಚ್ಚು ಕಾರ್ಮಿಕರ ಬಲಿ, ಹಲವರಿಗೆ ಗಂಭೀರ ಗಾಯ

Share
ತಮಿಳುನಾಡು
Share

ವಿರುಧುನಗರ (ತಮಿಳುನಾಡು): ಇಲ್ಲಿನ ಕಟ್ಟನಾರ್‌ಪಟ್ಟಿ ಗ್ರಾಮದ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಭಾನುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಮೃತರ ಪೈಕಿ 16 ಮಹಿಳೆಯರು ಮತ್ತು ಮೂವರು ಪುರುಷರನ್ನು ಗುರುತಿಸಲಾಗಿದ್ದು, ಉಳಿದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಭಾನುವಾರ ರಜಾ ದಿನವಾಗಿದ್ದರೂ ನಿಯಮಗಳನ್ನು ಉಲ್ಲಂಘಿಸಿ ಕಾರ್ಖಾನೆಯಲ್ಲಿ ಕೆಲಸ ನಡೆಸಲಾಗುತ್ತಿತ್ತು. ರಾಸಾಯನಿಕಗಳನ್ನು ಮಿಶ್ರಣ ಮಾಡುವಾಗ ಸಂಭವಿಸಿದ ಘರ್ಷಣೆಯಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಸಚಿವರಾದ ಕೆ.ಕೆ.ಎಸ್.ಎಸ್.ಆರ್. ರಾಮಚಂದ್ರನ್ ಮತ್ತು ತಂಗಂ ತೆನ್ನರಸು ಅವರಿಗೆ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಲು ಸೂಚಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles