ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅಪಘಾತದಲ್ಲಿ ಮೃತಪಟ್ಟ ಶಿಕ್ಷಕನ ಕುಟುಂಬಕ್ಕೆ ಸಿಕ್ತು 1 ಕೋಟಿ ಪರಿಹಾರ! ಸಿಕ್ಕಿದ್ದು ಹೇಗೆ ಗೊತ್ತಾ?

On: November 11, 2025 6:29 PM
Follow Us:
---Advertisement---

SUDDIKSHANA KANNADA NEWS/DAVANAGERE/DATE:11_11_2025

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಎಕ್ಕೆಗೊಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಬಿ.ತಿಪ್ಪಣ್ಣ ಅಪಘಾತದಲ್ಲಿ ಮೃತರಾದಗಿದ್ದು, ಕೆನರಾ ಬ್ಯಾಂಕ್ ಸಹಯೋಗದಲ್ಲಿ ಅವರ ಅವಲಂಬಿತ ಕುಟುಂಬಕ್ಕೆ ಅಪಘಾತ ವಿಮೆ ಪಾಲಿಸಿಯಡಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೂ.1 ಕೋಟಿ ಪರಿಹಾರ ಮೊತ್ತ ನೀಡಲಾಯಿತು.

READ ALSO THIS STORY: ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಹೆಚ್ಚಿನ ಸಂಶೋಧನೆಗೆ ಅನುದಾನ ಕೊಡುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ: ಡಾ. ಪ್ರಭಾ ಮಲ್ಲಿಕಾರ್ಜುನ್

ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಪರಿಹಾರ ಚೆಕ್ ವಿತರಿಸಿ ಮಾತನಾಡಿ, ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವುಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳುತ್ತಿಲ್ಲ. ಕಷ್ಟದ ಸಂದರ್ಭಗಳಲ್ಲಿ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತವೆ. ಆದ್ದರಿಂದ ಪ್ರತಿಯೊಬ್ಬ ಸರ್ಕಾರಿ ನೌಕರ ವೇತನ ಪ್ಯಾಕೇಜ್ ಖಾತೆ ಮಾಡಿಕೊಳ್ಳಬೇಕು. ಯಾವುದೇ ಒಬ್ಬ ವ್ಯಕ್ತಿ ಆಕಸ್ಮಿಕವಾಗಿ ಮರಣ ಹೊಂದಿದಲ್ಲಿ ಅಪಘಾತ ಅಥವಾ ವಿವಿಧ ರೀತಿಯ ವೈಯಕ್ತಿಕ ಅಪಘಾತ ಹಾಗೂ ವೈಮಾನಿಕ ಅಪಘಾತ ವಿಮೆ ಸೇವೆಗಳಡಿ ರೂ.50 ಲಕ್ಷದಿಂದ ರೂ.1 ಕೋಟಿ ವರೆಗೆ ಪರಿಹಾರವನ್ನು ಅವಲಂಬಿತ ಕುಟುಂಬಗಳಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.

ಈ ಯೋಜನೆಯೂ ಕೇವಲ ಸರ್ಕಾರಿ ನೌಕರರಿಗೆ ಅಲ್ಲದೇ ಅರೆ ಸರ್ಕಾರಿ ನೌಕರರಿಗೂ ಸಹ ವಿವಿಧ ಪ್ಯಾಕೇಜ್‍ಗಳಲ್ಲಿ ಸೇವೆ ಲಭ್ಯವಿದೆ. ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಅದಲ್ಲದೇ ಕೇಂದ್ರ ಸರ್ಕಾರವೂ ಸಹ ಪ್ರಧಾನ ಮಂತ್ರಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ ಜಾರಿ ಮಾಡಿದೆ. ಜೀವ ವಿಮಾ ನೋಂದಣಿಯೊಂದಿಗೆ ವಾರ್ಷಿಕ ರೂ.430 ಪಾವತಿಸಿದಲ್ಲಿ ರೂ.1 ಲಕ್ಷದಿಂದ 5 ಲಕ್ಷದವರೆಗೆ ವಿಮೆ ಪಾವತಿ ಮಾಡಲಾಗುತ್ತದೆ. ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ ಜಾರಿ ಮಾಡಿದೆ. ಆದ್ದರಿಂದ ಕಷ್ಟದ ಸುಳಿಗೆ ಸಿಲುಕಿಕೊಳ್ಳುವ ಬದಲಾಗಿ. ಇಂತಹ ಯೋಜನೆಗಳ ನೊಂದಣಿ ಮಾಡಿಸಿಕೊಳುವ ಮೂಲಕ ಭವಿಷ್ಯದಲ್ಲಿ ಎದುರಾಗುವ ಸಂಕಷ್ಟಗಳಿಂದ ಮುಕ್ತರಾಗಿ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಎಸ್.ಬಸವಂತಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಡದಯ್ಯ ಹಿರೇಮಠ್, ಡಿಜಿಎಂ ತನ್ಮಯ್ ದಾಸ್, ಡಿಡಿಪಿಐ ಕೊಟ್ರೇಶ್ ಸೇರಿದಂತೆ ಮತ್ತಿತರರು ಇದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment