ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕುಲದೀಪ್ ಯಾದವ್ ಕಮಾಲ್, ಪಾಕ್ ಗೆ ಸೋಲುಣಿಸಿದ ಭಾರತ (India): 228ರನ್ ಭರ್ಜರಿ ಜಯ, ವಿರಾಟ್ ಕೊಹ್ಲಿ ಪಂದ್ಯ ಪುರುಷೋತ್ತಮ

On: September 11, 2023 5:51 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:11-09-2023

ಕೊಲಂಬೋ: ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ (India) ಭರ್ಜರಿ ಜಯಭೇರಿ ಬಾರಿಸಿದೆ. 228 ರನ್ ಗಳ ಅಂತರದ ಗೆಲುವು ದಾಖಲಿಸುವ ಮೂಲಕ ಪಾಕ್ ಗೆ ಸಖತ್ತಾಗಿಯೇ ಸೋಲಿನ ರುಚಿ ಉಣಿಸಿದೆ.

ಈ ಸುದ್ದಿಯನ್ನೂ ಓದಿ: 

ಅಬ್ಬರಿಸಿ ಬೊಬ್ಬಿರಿದ ವಿರಾಟ್ ಕೊಹ್ಲಿ(Virat Kohli),ರಾಹುಲ್: ಸಿಕ್ಸರ್, ಬೌಂಡರಿಗೆ ಪಾಕ್ ಬೌಲಿಂಗ್ ಪಡೆ ಉಡೀಸ್.. 13 ಸಾವಿರ ರನ್ ಗಳ ಸರದಾರ ವಿರಾಟ್ ..!

ಕುಲದೀಪ್ ಯಾದವ್ ಮಾರಕ ದಾಳಿಗೆ ತಲೆಗೆರೆಯಂತೆ ವಿಕೆಟ್ ಕಳೆದುಕೊಳ್ಳುತ್ತಾ ಹೋದ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ಯಾವ ಹಂತದಲ್ಲಿಯೂ ಪ್ರತಿರೋಧ ತೋರಲೇ ಇಲ್ಲ. 8 ಓವರ್ ಗಳನ್ನು ಎಸೆದ ಕುಲದೀಪ್ ಯಾದವ್ 25 ರನ್ ಗೆ ಐದು ವಿಕೆಟ್ ಪಡೆಯುವ ಮೂಲಕ ಪಾಕಿಸ್ತಾನದ ಬ್ಯಾಟಿಂಗ್ ಬೆನ್ನೆಲಬನ್ನು ಮುರಿದರು. ಶಾರ್ದೂಲ್ ಠಾಕೂರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.

ಕನ್ನಡಿಗ ಕೆ. ಎಲ್. ರಾಹುಲ್ ಹಾಗೂ ಕಿಂಗ್ ವಿರಾಟ್ ಕೊಹ್ಲಿ ಬಾರಿಸಿದ ಭರ್ಜರಿ ಶತಕದ ನೆರವಿನಿಂದ ಭಾರತ ತಂಡವು, ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 356 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಆದರೆ ಯಾವ ಹಂತದಲ್ಲಿಯೂ ಪಾಕಿಸ್ತಾನ ತಂಡವು ಭಾರತಕ್ಕೆ ಸರಿಸಾಟಿಯಾಗಲೇ ಇಲ್ಲ. ಫಜರ್ ಜಮಾನ್ 27 ಹಾಗೂ ಇಫ್ತಿಯಾರ್ ಅಹ್ಮದ್ 23 ರನ್ ಗಳಿಸಲಷ್ಟೇ ಶಕ್ತವಾದರು. ಉಳಿದ ಬ್ಯಾಟ್ಸ್ ಮನ್ ಗಳು ಎರಡಂಕಿ ದಾಟಲಿಲ್ಲ. 32 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಪಾಕಿಸ್ತಾನ ಕೇವಲ 128 ರನ್ ಗಳಿಸಿ ಹೀನಾಯ ಸೋಲು ಅನುಭವಿಸಿತು.

ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ಇಂದು ಭಾರತವು ಮೇಲುಗೈ ಸಾಧಿಸಿತು. ಭಾನುವಾರ 24.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್ ಪೇರಿಸಿತ್ತು. ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಭರ್ಜರಿ ಅರ್ಧಶತಕದ ನೆರವಿನಿಂದ ಈ ಮೊತ್ತ ಪೇರಿಸಿತ್ತು. ಮಳೆ ಸುರಿದ ಕಾರಣ ಸೋಮವಾರಕ್ಕೆ ಪಂದ್ಯ ಮುಂದೂಡಲಾಗಿತ್ತು.

ಇಂದು ನಡೆದ ಪಂದ್ಯದಲ್ಲಿ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಭಾರತದ ಆಟಗಾರರು ಆಲ್ ರೌಂಡ್ ಆಟ ಪ್ರದರ್ಶಿಸಿದರು.

Virat Kohli- Rahul Century
Virat Kohli- Rahul Century

ಭಾರತದ ಪರ ಐದು ವಿಕೆಟ್ ಪಡೆದು ಮಿಂಚಿದ ಕುಲದೀಪ್ ಯಾದವ್, ವಿರಾಟ್ ಕೊಹ್ಲಿ, ಕೆ. ಎಲ್. ರಾಹುಲ್ ಗೆಲುವಿನ ರೂವಾರಿ ಎನಿಸಿದರು. ಬ್ಯಾಟಿಂಗ್ ನಲ್ಲಿ ಕೊಹ್ಲಿ ಹಾಗೂ ರಾಹುಲ್ ಅಬ್ಬರಿಸಿದರೆ, ಬೌಲಿಂಗ್ ನಲ್ಲಿ ಕುಲದೀಪ್ ಯಾದವ್ ಕಮಾಲ್ ಮಾಡಿದರು. ಸೂಪರ್ 4 ಹಂತದ ಪಾಯಿಂಟ್ಸ್ ಟೇಬಲ್ ನಲ್ಲಿ ಭಾರತ ಅಗ್ರಸ್ಥಾನಕ್ಕೇರಿದ್ದರೆ, ಪಾಕಿಸ್ತಾನ ಮೂರನೇ ಸ್ಥಾನಕ್ಕೆ ಕುಸಿದಿದೆ. ಭರ್ಜರಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment