ನವಾನ್‌ಶಹರ್ (ಪಂಜಾಬ್): ಆನ್‌ಲೈನ್ ಗೇಮಿಂಗ್‌ನಲ್ಲಿ ಭಾರಿ ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ ಹಾಗೂ ಕುಟುಂಬದ ಒತ್ತಡಕ್ಕೆ ಹೆದರಿ ವಿಷ ಸೇವಿಸಿದ್ದ ಮೂವರು ಸ್ನೇಹಿತರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪಂಜಾಬ್‌ನ ನವಾನ್‌ಶಹರ್ ಜಿಲ್ಲೆಯಲ್ಲಿ ಆಗಸ್ಟ್ 10 ರಂದು ಈ ದುರಂತ ಸಂಭವಿಸಿದೆ. ಮೃತರನ್ನು ಪರಮ್‌ಜಿತ್ ಸಿಂಗ್ ಖಾಲ್ಸಾ (13) ಮತ್ತು ದಿಲ್‌ಪ್ರೀತ್ ಸಿಂಗ್ (21) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಅಪ್ರಾಪ್ತ ಮಣಿಂದರ್ ಸಿಂಗ್ (15) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ.
ಪ್ರಾಥಮಿಕ ತನಿಖೆಯ ಪ್ರಕಾರ, ಇವರಲ್ಲಿ ಒಬ್ಬಾತ ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ ದೊಡ್ಡ ಮಟ್ಟದ ಹಣ ಕಳೆದುಕೊಂಡಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಈ ಘಟನೆ ಕುರಿತು ಪೋಲಿಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.





Leave a comment