SUDDIKSHANA KANNADA NEWS/ DAVANAGERE/ DATE:06-03-2025
ಬೆಂಗಳೂರು: ಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ವಿವಾಹ ಸಮಾರಂಭಕ್ಕೆ ಗಣ್ಯಾತಿ ಗಣ್ಯರು ಆಗಮಿಸಿ ಶುಭ ಕೋರಿದರು.
ಬಿಜೆಪಿ ಶಾಸಕರು ಹಾಗೂ ಮುಖಂಡರೊಂದಿಗೆ ಭಾಗವಹಿಸಿ ಬಿಜೆಪಿ ರಾಜ್ಯ. ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಸಿದರು.
ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ವಿವಿಧ ಪಕ್ಷಗಳ ನಾಯಕರು, ಮುಖಂಡರು, ಹಿತೈಷಿಗಳು, ಸಂಬಂಧಿಕರು ಆಗಮಿಸಿದ್ದರು.
ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಯಶಸ್ವೀ ಸಂಘಟಕರಾಗಿ ಕರ್ನಾಟಕವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿರುವ ತೇಜಸ್ವಿ ಸೂರ್ಯ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಅಡಿಯಿಡುತ್ತಿರುವ ದಕ್ಷಿಣ ಭಾರತದ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೋಡಿಯ ದಾಂಪತ್ಯ ಜೀವನವು ಅತ್ಯಂತ ಸುಖಕರವಾಗಿರಲೆಂದು ಇದೇ ಸಂದರ್ಭದಲ್ಲಿ ವಿಜಯೇಂದ್ರ ಹಾರೈಸಿದರು.