SUDDIKSHANA KANNADA NEWS/ DAVANAGERE/ DATE:27-02-2024
ದಾವಣಗೆರೆ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ ಸಂಸ್ಥೆಯಿಂದ ಉದ್ಯಮಾಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಮಾರ್ಚ್-2024ರ ಮೊದಲನೇ ವಾರ, ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ.
18 ರಿಂದ 55 ವರ್ಷವಯೋಮಾನ, 10ನೇ ತರಗತಿ ಪಾಸಾಗಿರಬೇಕು. ಪರಿಶಿಷ್ಟ ಪಂಗಡದವರಾಗಿರಬೇಕು. ಅಭ್ಯರ್ಥಿಗಳು 2 ಪಾಸ್ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ-577006, ತರಬೇತುದಾರಾದ ಬಸವರಾಜ ಜಿ. ಬಿ. ಮೊ.ಸಂ: 9164742033, ವಿನಯ.ಜಿ.ಕೆ ಮೊ.ಸಂ: 9886115200 ಇವರನ್ನು ಸಂಪರ್ಕಿಸಲು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.