ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉಗ್ರರ ದಾಳಿ: ಮೃತದೇಹಗಳನ್ನು ಗುರುತಿಸಲು ಕನ್ನಡಿಗರಿಗೆ ಸಚಿವ ಸಂತೋಷ್ ಲಾಡ್ ನೆರವು

On: April 23, 2025 6:14 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-23-04-2025

ನವದೆಹಲಿ: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ. ಪಹಲ್ಗಾಮ್‍ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.

ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.

ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ.

ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ” ಎಂದು ಲಾಡ್ ಅವರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment