ದಾವಣಗೆರೆ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ ಪದೇ ಪದೇ ದುರಸ್ಥಿಗೆ ಒಳಗಾಗುತ್ತಿದ್ದು ಕಳಪೆ ಗುಣಮಟ್ಟದ ಪರಿಕರಗಳನ್ನು ಅಳವಡಿಕೆ ಇದಕ್ಕೆ ಕಾರಣವಾಗಿದೆ. ಈ ರೀತಿ ಅಳವಡಿಸುವ ಪರಿಕರಗಳ ಗುಣಮಟ್ಟದ ಬಗ್ಗೆ ಲ್ಯಾಬ್‍ಗಳಲ್ಲಿ ಪರೀಕ್ಷಿಸುವಂತೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸೂಚನೆ ನೀಡಿದರು.
ಅವರು ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 791 ಶುದ್ದ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಗಿದ್ದು ಹಲವು ಕಡೆ ಖಾಸಗಿಯವರಿಗೆ ನಿರ್ವಹಣೆಗಾಗಿ ಗುತ್ತಿಗೆ ನೀಡಲಾಗಿದೆ. ಆದರೆ ದುರಸ್ಥಿಯಾದಾಗ ಕಳಪೆ ಪರಿಕರಗಳನ್ನು ಅಳವಡಿಸುವುದಿರಿಂದ ಪದೇ ಪದೇ ದುರಸ್ಥಿಗೆ ಒಳಗಾಗಿ ಜನರ ನೀರಿಗೆ ಸಮಸ್ಯೆಯಾಗುತ್ತಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸಭೆಯಲ್ಲಿ ಪ್ರಸ್ತಾಪಿಸಿದರು.
ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ ಚನ್ನಗಿರಿ ತಾಲ್ಲೂಕಿನಲ್ಲಿ ಉತ್ತಮವಾಗಿವೆ, ಅದಕ್ಕಾಗಿ ಈಗ ನಿರ್ವಹಿಸುತ್ತಿರುವ ಏಜೆನ್ಸಿಯವರು ಅಳವಡಿಸುವ ಪರಿಕರಗಳ ಬಗ್ಗೆ ಲ್ಯಾಬ್‍ನಲ್ಲಿ ಪರೀಕ್ಷಿಸುವಂತೆ ಸೂಚನೆ ನೀಡಿದರು.





Leave a comment