ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸೊಬಗು

On: November 1, 2025 11:27 AM
Follow Us:
ದಾವಣಗೆರೆ
---Advertisement---

SUDDIKSHANA KANNADA NEWS/DAVANAGERE/DATE:01_11_2025

ದಾವಣಗೆರೆ: ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯ ಶಾಲಾ-ಕಾಲೇಜಿನ ಮಕ್ಕಳು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಪಾಲಕರು ಸೇರಿ70ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

READ ALSO THIS STORY: ಭವಿಷ್ಯದಲ್ಲಿ ಪೊಲೀಸ್ ವೃತ್ತಿ ಮತ್ತಷ್ಟು ಕಠಿಣ: ಐಜಿಪಿ ಡಾ. ರವಿಕಾಂತೇಗೌಡ ಆತಂಕ ವ್ಯಕ್ತಪಡಿಸಿದ್ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ!
ಸಿದ್ಧಗಂಗಾ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಸದಾಶಿವ ಹೊಳ್ಳರವರು ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕದ ಹಿರಿಮೆಯನ್ನು ತಿಳಿಸುತ್ತಾ ನಾಡಿಗಾಗಿ ಶ್ರಮಿಸಿದ ದಿಗ್ಗಜರನ್ನು ಸ್ಮರಿಸಿದರು. ಭಾರತ ಜನನಿಯ ತನುಜಾತೆ ಕರ್ನಾಟಕ ಮಾತೆಯ ವೈಭವವನ್ನು ವರ್ಣಿಸಿದರು. 

70 ಮಕ್ಕಳಿಂದ “ಹಚ್ಚೇವು ಕನ್ನಡ ದೀಪ” ಗೀತೆಯನ್ನು ಸುಶ್ರಾವ್ಯವಾಗಿ ಪ್ರಸ್ತುತಪಡಿಸಲಾಯಿತು. ಅಕ್ಕಮಹಾದೇವಿ ಮತ್ತು ಬಸವಣ್ಣನವರ ವಚನಗಳನ್ನು ಸಿ.ಬಿ.ಎಸ್.ಇ ಎಲ್.ಕೆ.ಜಿ. ರಾಘವಿ ಮತ್ತು ಮನಿಷ್‌ ಗೌಡ ಹೇಳಿದರು. ಒಂದನೇ ತರಗತಿ ರಿಷಿಕ್‌ ಜ್ಞಾನಪೀಠ ಪ್ರಶಸ್ತಿ ಪಡೆದ ಕವಿಗಳ ಪರಿಚಯ ಮಾಡಿದರೆ, 2ನೇ ತರಗತಿ ತಾನ್ವಿ ಹರೀಶ್‌, ನಿದಾ ಫಾತಿಮ ಕಾದಂಬರಿಕಾರ ಎಸ್.‌ ಎಲ್.‌ ಭೈರಪ್ಪನವರ ಪರಿಚಯ ಮಾಡಿಕೊಟ್ಟರು. ಎಲ್.ಕೆ.ಜಿ. ರೇವಂತ್‌ ಆರ್ಯ ಮತ್ತು 8ನೇ ತರಗತಿ ಓಜಸ್‌ ರಾಜ್ಯೋತ್ಸವದ ಶುಭಾಷಯ ತಿಳಿಸಿದರು. ಪುಣಾಣಿ ಮಕ್ಕಳು ಜೋಗದ ಸಿರಿ ಬೆಳಕಿನಲ್ಲಿ ಹಾಡನ್ನು ಇಂಪಾಗಿ ಹಾಡಿದರು.

ಸಿ.ಬಿ.ಎಸ್.ಇ. 6ನೇ ತರಗತಿ ಮಕ್ಕಳು ಬಾರಿಸು ಕನ್ನಡ ಡಿಂಡಿಮ ಮತ್ತು ಕನ್ನಡ ಹೊನ್ನುಡಿ ದೇವಿಯನು ಪೂಜಿಸು ಹಾಡುಗಳಿಗೆ ಆಕರ್ಷಕ ನೃತ್ಯ ಮಾಡಿದರು. ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ವಂದನಾರ್ಪಣೆ ಸಂಸ್ಥೆಯ ಮುಖ್ಯಸ್ಥರಾದ ಶ್ರೀಮತಿ ಜಸ್ಟಿನ್‌ ಡಿʼಸೌಜ ಮಾಡಿದರೆ, ಶಿಕ್ಷಕಿ ಆಶಾರವರು ಅಚ್ಚುಕಟ್ಟಾಗಿ ನಿರೂಪಣೆ ನಡೆಸಿಕೊಟ್ಟರು. ಸಂಸ್ಥೆಯ ಕಾರ್ಯದರ್ಶಿ ಹೇಮಂತ್‌ ಮತ್ತು ನಿರ್ದೇಶಕ ಡಾ|| ಜಯಂತ್‌ರವರು ಭಾಗವಹಿಸಿದ್ದರು. ಮಕ್ಕಳು ಹಳದಿ ಕೆಂಪು ಬಣ್ಣದ ವಸ್ತ್ರಗಳಲ್ಲಿ ಕಂಗೊಳಿಸಿದರು. ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಕರು ರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದುಕೊಟ್ಟರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಕರ್ನಾಟಕ

ನೀತಿ ಆಯೋಗ 2025 ವರದಿ: ಐಟಿ, ಹಣಕಾಸು, ಆತಿಥ್ಯ ಮತ್ತು ರಿಯಲ್ ಎಸ್ಟೇಟ್ ಸೇರಿ ಸೇವಾ ಕ್ಷೇತ್ರಗಳಲ್ಲಿ ದೇಶದಲ್ಲೇ ಕರ್ನಾಟಕ ಫಸ್ಟ್!

ಸಿದ್ದರಾಮಯ್ಯ

18000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಉದ್ಯೋಗದ ಬಗ್ಗೆ ಮಹತ್ವದ ಮಾಹಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ದ್ರೋಹದಿಂದ 1 ಲಕ್ಷ ಕೋಟಿ ರೂ. ಕರ್ನಾಟಕಕ್ಕೆ ನಷ್ಟ: ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

ಸಿದ್ದರಾಮಯ್ಯ

ಎಐನಿಂದ ಉದ್ಯೋಗ ನಷ್ಟವಾಗದಂತೆ ಕನ್ನಡ ಭಾಷೆ ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ ಘೋಷಣೆ

ಸಿದ್ದರಾಮಯ್ಯ

800 ಕನ್ನಡ ಮತ್ತು 100 ಉರ್ದುಶಾಲೆಗಳು ಕೆಪಿಎಸ್ ಶಾಲೆಗಳಾಗಿ ಅಭಿವೃದ್ಧಿ ಜೊತೆಗೆ ಮದರಸಾಗಳಲ್ಲಿ ಕನ್ನಡ ಕಲಿಕೆಗೆ ಆದ್ಯತೆ: ಸಿದ್ದರಾಮಯ್ಯ ಘೋಷಣೆ!

ಕರ್ನಾಟಕ ರಾಜ್ಯೋತ್ಸವ

ರಾಜ್ಯ, ಜಿಲ್ಲಾಡಳಿತದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಛಾಯಾಗ್ರಾಹಕರ ಕಡೆಗಣನೆ: ಮನು ಎಂ. ದೇವಗಿರಿ ಆರೋಪ!

Leave a Comment