ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗುರುವಾರ ನಿಧನರಾದರು. ದೇಶಾದ್ಯಂತ ಏಳು ದಿನಗಳ ರಾಷ್ಟ್ರೀಯ ಶೋಕಚಾರಣೆ ಘೋಷಿಸಲಾಗಿದ್ದು, ಇಂದು ರಾತ್ರಿಯಿಂದ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ನಿರೀಕ್ಷೆ ಇದೆ. ಅವರ ಅಂತ್ಯಕ್ರಿಯೆ ಶನಿವಾರ ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.
ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶನಿವಾರ ದೆಹಲಿ ರಾಜ್ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.
ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಗುರುವಾರ ರಾತ್ರಿಯೇ ಅವರ ನಿವಾಸಕ್ಕೆ ತರಲಾಗಿದೆ. ಇಂದು (ಶುಕ್ರವಾರ) ರಾತ್ರಿ 9-10 ಗಂಟೆಯ ನಂತರ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.