SUDDIKSHANA KANNADA NEWS/ DAVANAGERE/ DATE:14-02-2025
ದಾವಣಗೆರೆ: ಗ್ರಾಮ ಆಡಳಿತಾಧಿಕಾರಿಗಳು ಕೈಗೊಂಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಆಗುತ್ತಿರುವ ವಿಳಂಬ ತಪ್ಪಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಶ್ಯಕವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆ ಪಡೆಯಲು ವಿಳಂಬವಾಗುತ್ತಿದೆ ಎಂಬ ಆತಂಕ ಪರಿಹರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಸಹಾಯಕ್ಕೆ 08192-257778 ದೂರವಾಣಿಗೆ ಕರೆ ಮಾಡಬೇಕು.
ಆದರೆ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡಬಾರದೆಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ತಿಳಿಸಿದ್ದಾರೆ.