SUDDIKSHANA KANNADA NEWS/ DAVANAGERE/ DATE:02-02-2024
ತುಮಕೂರು: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ಗೆ ಬಿಟ್ಟಿದ್ದು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಲು ಶ್ರಮಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ಬಿಜೆಪಿ ಅಭ್ಯರ್ಥಿಗಳೆಂದು ಕೆಲವರು ಓಡಾಡುತ್ತಿರಬಹುದು. ತುಮಕೂರಿನಲ್ಲಿ ಮಾಜಿ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಓಡಾಡುತ್ತಿರುವ ಕುರಿತಂತೆ ಹೆಚ್ಚಿನ ಮಾಹಿತಿ ಇಲ್ಲ. ಚುನಾವಣೆಗೆ ಅಭ್ಯರ್ಥಿಗಳನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ. ಕಾರ್ಯಕರ್ತರ ಅಭಿಪ್ರಾಯವೂ ಮುಖ್ಯವಾಗುತ್ತದೆ. ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡುವುದು ಪಕ್ಷದ ವರಿಷ್ಠರು. ತುಮಕೂರು ಜಿಲ್ಲೆಯಲ್ಲಿ ಸೋಮಣ್ಣ ಸಂಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ್ರು.