ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನರೇಂದ್ರ ಮೋದಿ ಆರ್ ಎಸ್ ಎಸ್ ಹೊಗಳಿಕೆ ದೇಶಕ್ಕೆ ಅಪಮಾನ, ಪ್ರಧಾನಿ ದೇಶದ ಕ್ಷಮೆ ಕೇಳಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ!

On: August 15, 2025 8:47 PM
Follow Us:
ಸಿದ್ದರಾಮಯ್ಯ
---Advertisement---

SUDDIKSHANA KANNADA NEWS/ DAVANAGERE/DATE:15_08_2025

ಬೆಂಗಳೂರು: 79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್ ಎಸ್ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

READ ALSO THIS STORY: ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ ಕೂಲಿ ಕಲೆಕ್ಷನ್: ಎರಡನೇ ದಿನದ ಕಲೆಕ್ಷನ್ ಸೂಪರ್!

ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನ ವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸುವ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ನರೇಂದ್ರ ಮೋದಿ ಅವರು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ. ಸ್ವತಂತ್ರ ಭಾರತದಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷಗಳ ಪ್ರಧಾನ ಮಂತ್ರಿಯವರೂ ಈ ರೀತಿ ಸ್ವಾತಂತ್ರ್ಯೋತ್ಸವದ ವೇದಿಕೆಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿಲ್ಲ. ನರೇಂದ್ರ ಮೋದಿಯವರು ದೇಶದ ಜನ ಗೌರವಿಸುವ ಈ ವೇದಿಕೆಯ ಘನತೆ-ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಆರ್ ಎಸ್ ಎಸ್ ನಾಯಕರು ಸ್ವಾತಂತ್ರ್ಯಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳೇ ಇಲ್ಲ. ಅದೇ ರೀತಿ ನಾಗಪುರದಲ್ಲಿರುವ ಆರ್ ಎಸ್ ಎಸ್ ನ ಕೇಂದ್ರ ಕಚೇರಿಯಲ್ಲಿ 2001ರ ವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನವೂ ರಾಷ್ಟ್ರ ಧ್ವಜದ ಧ್ವಜಾರೋಹಣ ಮಾಡಿರಲೇ ಇಲ್ಲ. 2001ರಲ್ಲಿ ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ಆರ್ ಎಸ್ ಎಸ್ ದೂರು ಕೊಟ್ಟು ಜೈಲಿಗೆ ಅಟ್ಟಿತ್ತು ಎನ್ನುವುದನ್ನು ದೇಶದ ಜನ ಮರೆತಿಲ್ಲ ಎಂದು ತಿವಿದಿದ್ದಾರೆ.

ಕೆಂಪುಕೋಟೆ ಭಾರತೀಯ ಜನತಾ ಪಕ್ಷದ ರಾಜಕೀಯ ವೇದಿಕೆ ಅಲ್ಲ, ಆ ಸ್ಥಳದಲ್ಲಿ ಪಕ್ಷಾತೀತವಾಗಿ ಆಚರಿಸಲಾಗುವ ಸ್ವಾತಂತ್ರ್ಯತ್ಸೋವದಲ್ಲಿ ಎಲ್ಲ ಜಾತಿ-ಧರ್ಮ, ಪಕ್ಷ-ಪಂಥಗಳ ಜನ ಭಾಗವಹಿಸುತ್ತಾರೆ. ಅಂತಹ ಪವಿತ್ರ  ವೇದಿಕೆಯಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮಾತನಾಡದೆ ಆರ್ ಎಸ್ ಎಸ್ ಪ್ರಚಾರಕನಂತೆ ಮಾತನಾಡಿರುವುದು ದುರದೃಷ್ಟಕರ ಎಂದು ಕಿಡಿಕಾರಿದ್ದಾರೆ.

ಕಳೆದ ಹನ್ನೊಂದು ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ದಿನ ಆರ್ ಎಸ್ ಎಸ್ ಅನ್ನು ನೆನಪು ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಆರ್ ಎಸ್ ಎಸ್ ಸೇವೆಯನ್ನು ಸ್ಮರಿಸಿಕೊಂಡಿರುವುದು ಖಂಡಿತ ಅದರ ಮೇಲಿನ ಅಭಿಮಾನದಿಂದ ಅಲ್ಲ. ಇದಕ್ಕೆ ಮುಖ್ಯ ಕಾರಣ ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಅವರಲ್ಲಿ ಹುಟ್ಟಿರುವ ಅಭದ್ರತೆ. ಕಳೆದ ಚುನಾವಣೆಯಲ್ಲಿನ ಹಿನ್ನಡೆಯ ನಂತರ ಮೋದಿಯವರು ತಮ್ಮ ಮಾತೃಸಂಸ್ಥೆಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ನರೇಂದ್ರ ಮೋದಿ ಅವರು ಬಣ್ಣಿಸಿರುವ ಆರ್ ಎಸ್ ಎಸ್, ಇಂದಿನ ವರೆಗೂ ಅಧಿಕೃತವಾಗಿ ನೋಂದಣಿಯಾಗದ, ಸಾರ್ವಜನಿಕ ದೇಣಿಗೆ ಸಂಗ್ರಹಿಸಿದರೂ ತೆರಿಗೆ ಪಾವತಿ ಮಾಡದ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಯಾಗಿದೆ. ಪಾರದರ್ಶಕತೆಯಾಗಲಿ, ಉತ್ತರದಾಯಿತ್ವವಾಗಲಿ ಇಲ್ಲದ ಆರ್ ಎಸ್ ಎಸ್ ರಹಸ್ಯ ಸಂಘಟನೆಯಾಗಿಯೇ ಕೆಲಸ ಮಾಡುತ್ತಿರುವುದನ್ನು ದೇಶದ ಜನತೆ ಗಮನಿಸದ್ದಾರೆ ಎಂದಿದ್ದಾರೆ.

ಕೋಮುವಾದವನ್ನೇ ಉಸಿರಾಗಿಸಿಕೊಂಡ ಆರ್ ಎಸ್ ಎಸ್ ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿ ಭಾರತೀಯ ಜನತಾ ಪಕ್ಷವನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯಾಗಲಿ ಇಲ್ಲ ಎನ್ನುವುದು ಸಾಬೀತಾಗಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್ ಎಸ್ ಎಸ್ ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮಹಾಗಣಪತಿ

ಹಿಂದೂ ಮಹಾಗಣಪತಿ ಸಮಿತಿಯಿಂದ ಎಸ್. ಎಸ್. ಮಲ್ಲಿಕಾರ್ಜುನ್, ಎಂ. ಪಿ. ರೇಣುಕಾಚಾರ್ಯಗೆ ಸನ್ಮಾನ

ಗಣೇಶ

“ಗಣೇಶ ಹಬ್ಬದ ಪೆಂಡಾಲ್ ಗಳು ಕ್ರಾಂತಿಕಾರಿಗಳ ಕಾರ್ಖಾನೆಗಳು, ಇಲ್ಲಿಂದಲೇ ಸ್ವಾತಂತ್ರ್ಯ ಕ್ರಾಂತಿ: ಹಾರಿಕಾ ಮಂಜುನಾಥ್ ಅಬ್ಬರದ ಭಾಷಣ!

ಮೆಡಿಕವರ್ ಆಸ್ಪತ್ರೆಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ

BIG BREAKING: ದಾವಣಗೆರೆಯ ಮಟ್ಟಿಕಲ್ ಫ್ಲೆಕ್ಸ್ ವಿವಾದ: ಪಿಎಸ್ಐ ಸಚಿನ್ ಸೇರಿ ಮೂವರ ಸಸ್ಪೆಂಡ್!

M. P. Renukacharya

ನೂರಾರು ಕೇಸ್ ಹಾಕಿ ತಾಕತ್ತಿದ್ದರೆ ಬಂಧಿಸಿ: ಎಫ್ಐಆರ್ ಬಳಿಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಎಂ. ಪಿ. ರೇಣುಕಾಚಾರ್ಯ ಸವಾಲ್!

M. P. Renukacharya

BIG NEWS: “ಡಿಜೆ ಬಳಸಿ, ತಾಕತ್ತಿದ್ದರೆ ಜಿಲ್ಲಾಡಳಿತ ತಡೆಯಲಿ” ಎಂದಿದ್ದ ಎಂ. ಪಿ. ರೇಣುಕಾಚಾರ್ಯ ವಿರುದ್ಧ ಎಫ್ ಐಆರ್! ದೂರಿನ ಕಂಪ್ಲೀಟ್ ಡೀಟೈಲ್ಸ್

Leave a Comment