Home ದಾವಣಗೆರೆ ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪಾರದರ್ಶಕ: ಸಚಿವ ಬಿ. ಎಸ್. ಸುರೇಶ್
ದಾವಣಗೆರೆನವದೆಹಲಿಬೆಂಗಳೂರು

ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆ ಪಾರದರ್ಶಕ: ಸಚಿವ ಬಿ. ಎಸ್. ಸುರೇಶ್

Share
Share

ಬೆಳಗಾವಿ ಸುವರ್ಣಸೌಧ: ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ ಬಿ ಎಸ್ ಸುರೇಶ್ ಸ್ಪಷ್ಟನೆ ನೀಡಿದರು.

ನಗರಾಭಿವೃದ್ಧಿ ಇಲಾಖೆಯಿಂದ ಹಂಚಿಕೆ ಮಾಡುವ ಸಿ.ಎ. ನಿವೇಶನಗಳಿಗೆ ಸಾರ್ವಜನಿಕರು ನಿರಾಸಕ್ತಿ ತೋರಿಸುತ್ತಿರುವ ಬಗ್ಗೆ ಹಾಗೂ ಗುತ್ತಿಗೆಯನ್ನು ವಿಸ್ತರಿಸುವ ಪ್ರಕ್ರಿಯೆಯಲ್ಲಿ ಇಲಾಖೆಯು ಸಮರ್ಪಕವಾದ ನೀತಿಯನ್ನು ಅನುಸರಿಸುತ್ತಿಲ್ಲ ಎಂದು ಸದಸ್ಯರಾದ ಡಿ ಎಸ್ ಅರುಣ್ ಅವರು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರ ಗಮನ ಸೆಳೆಯುವ ಸೂಚನೆಯ ಮೇಲೆ ಮಾತನಾಡಿದ ಸಚಿವರು, ರಾಜ್ಯದಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಮತ್ತು ನಗರ ಯೋಜನಾ ಪ್ರಾಧಿಕಾರಗಳಲ್ಲಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರೀಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮಗಳು 1991 ರನ್ವಯ ಹಾಗೂ ಕರ್ನಾಟಕ ಯೋಜನಾ ಪ್ರಾಧಿಕಾರಗಳ (ನಾಗರೀಕ ಸೌಕರ್ಯ ನಿವೇಶನಗಳ ಹಂಚಿಕೆ) 2016 ರನ್ವಯ ಕ್ರಮವಾಗಿ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದರು.

ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡಲು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರೀಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮಗಳು 1991ರ ನಿಯಮ 7 ಉಪ ನಿಯಮ (3) ರನ್ವಯ ನಾಗರಿಕ ಸೌಲಭ್ಯಗಳುಳ್ಳ ನಿವೇಶನಗಳ ಹಂಚಿಕೆಯ ಸಮಿತಿಯನ್ನು ರಚಿಸಬಹುದಾಗಿದೆ. ಈ ಸಮಿತಿಯು ನಿಯಮ 7(1) ರಲ್ಲಿನ ಅಂಶಗಳೊAದಿಗೆ ಪರಿಶೀಲಿಸಿ ನಾಗರೀಕ ಸೌಲಭ್ಯ ನಿವೇಶನ ಹಂಚಿಕೆ ಮಾಡಲು ಸಮಿತಿಯು ತೀರ್ಮಾನ ಕೈಗೊಳ್ಳುತ್ತದೆ. ಈ ತೀರ್ಮಾನವು ಪ್ರಾಧಿಕಾರದ ಅನುಮೋದನೆಗೆ ಒಳಪಟ್ಟಿರುತ್ತದೆ ಎಂದು ತಿಳಿಸಿದರು.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ) ನಿಯಮಗಳು-1991 ನಿಯಮ-8(1)ರ ರೀತ್ಯಾ ಉಪನೋಂದಣಾಧಿಕಾರಿಗಳ ಮಾರ್ಗಸೂಚಿ ಬೆಲೆಯನ್ನು ಅನುಸರಿಸಿ ಗುತ್ತಿಗೆ ಮೊತ್ತದ ದರವನ್ನು ನಿಗಧಿಪಡಿಸಬೇಕಾಗುತ್ತದೆ. ಅದರಂತೆ ಸಂಬಂಧಪಟ್ಟ ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಯೋಜನಾ ಪ್ರಾಧಿಕಾರಗಳು ನಾಗರೀಕ ಸೌಕರ್ಯ ನಿವೇಶನಗಳನ್ನು ಗುತ್ತಿಗೆ ಆಧಾರದ ಮೇಲೆ 30 ವರ್ಷಗಳ ಅವಧಿಗೆ ನೀಡುತ್ತಿರುತ್ತದೆ ಎಂದರು.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ) ನಿಯಮಗಳು-1991 8(1) ರಂತೆ ಗುತ್ತಿಗೆ ಮೌಲ್ಯದ ಹೆಚ್ಚುವರಿ ಶೇ.50 ರಂತೆ ಗುತ್ತಿಗೆ, ಮೌಲ್ಯವನ್ನು ನಿಗಧಿಪಡಿಸಿ ನಿಯಮ-10 (14)ರನ್ವಯ ಸಿ.ಎ ನಿವೇಶನಗಳ ನವೀಕರಣವನ್ನು ಸರ್ಕಾರದ ಪೂರ್ವಾನುಮೋದನೆಯನ್ನು ಪಡೆದು ಮುಂದಿನ 30 ವರ್ಷಗಳ ಅವಧಿಗೆ ಗುತ್ತಿಗೆ ಅವಧಿಯನ್ನು ವಿಸ್ತರಿಸಬೇಕಾಗಿರುತ್ತದೆ ಎಂದರು.

ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಮತ್ತು ನಗರ ಯೋಜನಾ ಪ್ರಾಧಿಕಾರಗಳಿಗೆ ಸರ್ಕಾರದ ವತಿಯಿಂದ ಯಾವುದೇ ಅನುದಾನವನ್ನು ನೀಡುವುದಿಲ್ಲ. ಪ್ರಾಧಿಕಾರಗಳು ಸ್ವಂತ ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಿಕೊಂಡು ಕಾರ್ಯ ನಿರ್ವಹಿಸುತ್ತವೆ ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *