SUDDIKSHANA KANNADA NEWS/ DAVANAGERE/ DATE:30-01-2025
ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತ ಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಿದ್ದು, ಇನ್ನೂ ಎಂಟು ಜನ ನಾಪತ್ತೆಯಾಗಿರುವ ಬಗ್ಗೆ ಮಾಹಿತಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಣೆ ಮಾಡಲಿದ್ದಾರೆ ಎಂದು ಹೇಳಿದರು.