ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಎಲ್ಲರೂ ಈಗ ಮೀಸಲಾತಿ ಪರವಿದ್ದಾರೆ, ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ: ಸಿಎಂ ಸಿದ್ದರಾಮಯ್ಯ ಅಭಿಮತ!

On: April 5, 2025 1:27 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:05-04-2025

ಬೆಂಗಳೂರು: ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ವಿವರಿಸಿದರು. ನರೇಂದ್ರ ಮೋದಿಯವರು EWS ಹೆಸರಲ್ಲಿ ಶೇ10 ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ ಎಂದು ವಿವರಿಸಿದರು.

ಸುಪ್ತ ಪ್ರತಿಭೆ ಹೊರಗೆ ತರುವ ಶಿಕ್ಷಣದಿಂದ ಯುವ ಸಮೂಹ ಸ್ವಾಭಿಮಾನಿಗಳಾಗಿ ಬೆಳೆಯಲು ಸಾಧ್ಯ ಎಂದರು.

ನಮ್ಮ ರಾಜ್ಯದಲ್ಲಿ ಮತ್ತು ತೆಲಂಗಾಣ, ಆಂಧ್ರದಲ್ಲಿ ಮಾತ್ರ SCP-TSP ಕಾಯ್ದೆ ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿಈ ಕಾಯ್ದೆ ತಂದೇ ಇಲ್ಲ ಏಕೆ ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ ಎಂದು ಪ್ರಶ್ನಿಸಿದರು.

ನಾವು ಜಾರಿ ಮಾಡಿರುವ ಐದೂ ಗ್ಯಾರಂಟಿಗಳೂ ಜನರ ಕೈಯಲ್ಲಿ ಹಣ ಇರಬೇಕು, ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಎನ್ನುವ ನಮ್ಮ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸಿದೆ ಎಂದರು. ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ ಈ ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವ ವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದರು.

ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲಾ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದೆ ಎಂದು ವಿವರಿಸಿದರು.

ಹೀಗಾಗಿ ಮಹಾನ್ ಚೇತನ ಬಾಬು ಜಗಜೀವನ್ ರಾಮ್ ಅವರ ಕಾಳಜಿಗಳನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟರುವ ಹೆಜ್ಜೆ ಗುರುತುಗಳನ್ನು ಪಾಲಿಸಬೇಕು ಎಂದರು. ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು ಎಂದರು.

ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಹೀಗಾಗಿ ಇವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು ಎಂದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment