ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಕೃಷಿಗೆ 7 ತಾಸು -ಗೃಹ ಮತ್ತು ಕೈಗಾರಿಕೆಗೆ ನಿರಂತರ ವಿದ್ಯುತ್: ಕೆ.ಜೆ.ಜಾರ್ಜ್

On: February 18, 2025 5:51 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-02-2025

ದಾವಣಗೆರೆ: ಕೃಷಿಗೆ 7 ತಾಸು ತ್ರಿಫೇಜ್ ವಿದ್ಯುತ್ ಮತ್ತು ಗೃಹ ಬಳಕೆ ಹಾಗೂ ಕೈಗಾರಿಕೆಗೆ ದಿನದ 24 ಗಂಟೆಗಳೂ ವಿದ್ಯುತ್ ಪೂರೈಕೆ ಮಾಡುವುದು ಸರ್ಕಾರದ ನೀತಿಯಾಗಿದ್ದು ಇದಕ್ಕೆ ಬದ್ದವಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂಧನ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ, ಆದರೆ ಕೆಲವೊಂದು ತಾಂತ್ರಿಕ ಸಮಸ್ಯೆಯಿಂದ ಕೆಲವೇ ಸ್ಥಳಗಳಲ್ಲಿ ಮಾತ್ರ ನಿರ್ವಹಣೆಗಾಗಿ ಕಡಿತ ಮಾಡಲಾಗುತ್ತದೆ. ಆದರೆ ಸರ್ಕಾರದ ಬದ್ದತೆಯಂತೆ ಕೃಷಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆದರೆ ಲೋಡ್‍ಶೆಡ್ಡಿಂಗ್ ಜಾರಿಯಲ್ಲಿರುವುದಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಪ್ರತಿನಿತ್ಯ 18500 ಮೆಗಾವ್ಯಾಟ್ ಬೇಡಿಕೆ ಇದ್ದು ಬೇಸಿಗೆ ಆರಂಭವಾಗಿರುವುದರಿಂದ ಸರಾಸರಿಗಿಂತ ಶೇ 10 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದರಿಂದ ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವಿದ್ಯುತ್ ಬ್ಯಾಂಕಿಂಗ್ ಮಾಡಿಕೊಂಡು ಜೂನ್‍ನಿಂದ ಆ ರಾಜ್ಯಗಳಿಗೆ ಕರ್ನಾಟಕದಿಂದ ವಿದ್ಯುತ್ ನೀಡಿ ಬೇಸಿಗೆಯಲ್ಲಿ ಅಲ್ಲಿಂದ ಗ್ರಿಡ್ ಮೂಲಕ ವಿದ್ಯುತ್ ಪಡೆಯಲು ಉದ್ದೇಶಿಸಲಾಗಿದೆ. ಗುಣಮಟ್ಟದ ವೋಲ್ಟೇಜ್‍ಗಾಗಿ ಅಗತ್ಯವಿರುವ ಕಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

3 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ; ಕುಸುಮ್-ಸಿ ಯೋಜನೆಯ ಮೂಲಕ ಮುಂದಿನ ಒಂದೂವರೆ ವರ್ಷದಲ್ಲಿ ಸೋಲಾರ್‍ನಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಈಗಾಗಲೇ ಕುಸುಮ್ ಯೋಜನೆಯಡಿ ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿದ್ದು ಸೋಲಾರ್ ಪ್ಯಾನಲ್ ಅಳವಡಿಕೆ, ವಿದ್ಯುತ್ ಉತ್ಪಾದನೆ ಹಂತ, ಭೂಮಿ ಸಮತಟ್ಟು ಮಾಡುವ ಕೆಲಸ ಪ್ರಗತಿಯಲ್ಲಿದ್ದು ಬರುವ ಏಪ್ರಿಲ್‍ನಲ್ಲಿ 300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಗ್ರಿಡ್‍ಗೆ ಕಳುಹಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ವಿವರಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment