ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ, ಇದೊಂದು ಬುದ್ದಿ ಇಲ್ಲದ ಬೇಜವಾಬ್ದಾರಿ ಸರ್ಕಾರ: ಬೊಮ್ಮಾಯಿ

On: June 6, 2025 6:54 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-06-06-2025

ಹಾವೇರಿ: ಆರ್ ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆಯಾಗಿದ್ದು ಪೊಲೀಸರನ್ನು ಎತ್ತಂಗಡಿ ಮಾಡುವುದಕ್ಕಿಂತ ಪ್ರಕರಣಕ್ಕೆ ಸಚಿವರು, ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಬುದ್ದಿ ಇಲ್ಲದ ಅತ್ಯಂತ ಬೇಜವಾಬ್ದಾರಿ ಸರ್ಕಾರ. ಇಂತಹ ಸರ್ಕಾರ ನೋಡಿರಲಿಲ್ಲ. ಬುದ್ದಿಗೇಡಿ ಸರ್ಕಾರ ಇದು ಎಂದು ವಾಗ್ದಾಳಿ ನಡೆಸಿದರು.

ಆರ್ ಸಿಬಿ ಮ್ಯಾಚ್ ಗೆದ್ದ ದಿನ ರಾತ್ರಿಯಿಡಿ ಅಭಿಮಾನಿಗಳು ವಿಜಯೋತ್ಸವ ಮಾಡಿದ್ದಾರೆ. ಅದಕ್ಕೆ ಪೊಲೀಸರು ಬಂದೋಬಸ್ತ್ ನೀಡಿದ್ದಾರೆ. ಬೆಳಗ್ಗೆ ತರಾತುರಿಯಲ್ಲಿ ವಿಜಯೋತ್ಸವ ಹಮ್ಮಿಕೊಂಡಿದ್ದು, ಪೊಲೀಸರು ಯಾವ ರೀತಿ ಭದ್ರತೆ ನೀಡಬೇಕು. ಇವರೇನು ಒಲಿಂಪಿಕ್ ಗೆದ್ದು ಬಂದಿದ್ದಾರಾ? ಆಯೋಜಕರು ಸಹ ಬೇಜವಾಬ್ದಾರಿ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಾಗಿಲು ಮುಚ್ಚಿದ್ದು ಈ ಅನಾಹುತಕ್ಕೆ ಕಾರಣ. ಈ ಸರ್ಕಾರ ರಾಜ್ಯವನ್ನ ಆಡಳಿತ ಮಾಡಲು ಅರ್ಹತೆ ಇಲ್ಲ. ಇಡೀ ಕಾರ್ಯಕ್ರಮ ಗೊಂದಲಮಯವಾಗಿತ್ತು. ಅವರ ಚೇಲಾಗಳೇ ವೇದಿಕೆಯಲ್ಲಿದ್ದರು. ಪೊಲೀಸರನ್ನು ಎತ್ತಂಗಡಿ ಮಾಡುದಕ್ಕಿಂತ ಪ್ರಕರಣಕ್ಕೆ ಸಚಿವರು, ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹೊಣೆ ಎಂದು ಆರೋಪಿಸಿದರು.

ಕ್ರಿಡಾಂಗಣದ ಹೊರಗಡೆ ಸಾವಿನ ಸುದ್ದಿ ಬಂದರೂ ಸಹ ಕ್ರೀಡಾಂಗಣದ ಒಳಗೆ ಕಾರ್ಯಕ್ರಮ ಮುಂದುವರೆಸಿದ್ದಾರೆ. ಒಂದುಕಡೆ ವಿಜಯೋತ್ಸವ, ಇನ್ನೊಂದು ಶವಯಾತ್ರೆ ಮಾಡಿದ್ದಾರೆ. ಇದೊಂದು ಸರ್ಕಾರನಾ. . ರಾಜ್ಯದಲ್ಲಿ ಕೋಮುಲಭೆ, ಅಪಹರಣ, ಗಲಾಟೆ ಕೊಲೆ ಪ್ರಕರಣಗಳು ಹೆಚ್ಚಾಗಿದೆ ಎಂದು ಹೇಳಿದರು.

ವಿರೋಧ ಪಕ್ಷ ಸಾವಿನಲ್ಲೂ ರಾಜಕಾರಣ ಮಾಡುತ್ತಿದೆ ಎಂಬು ಮುಖ್ಯಮಂತ್ರಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ 11 ಜನರು ಸತ್ತರು ನಾವು ಕೇಳಬಾರದಾ ? ಕೆಎಸ್ ಸಿಎ ಮೇಲೆ ಕೇಸ್ ಆಗಿದ್ದು ಸರಿ ಇದೆ. ಅದರೆ ಕಾನೂನು ಸುವ್ಯವಸ್ಥೆ ನಿರ್ವಹಣೆ ಮಾಡಲು ಸರ್ಕಾರ ವಿಫಲವಾಗಿದೆ. ಇದರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಹೇಳಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment