Site icon Kannada News-suddikshana

ತಿರುಪತಿ ಪ್ರಸಾದ ಲಡ್ಡುನಲ್ಲಿ ಮೀನಿನ ಎಣ್ಣೆ, ದನದ ಕೊಬ್ಬು ಬಳಕೆ ದೃಢ

ತಿರುಪತಿ :ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಲಡ್ಡುಗಳನ್ನು ಪ್ರಸಾದವಾಗಿ ವಿತರಿಸಲು ಗೋಮಾಂಸ ಟ್ಯಾಲೋ, ಮೀನಿನ ಎಣ್ಣೆ ಮತ್ತು ಪಾಮ್ ಆಯಿಲ್ ಅನ್ನು ಬಳಸಲಾಗುತ್ತಿದೆ ಎಂದು ಲ್ಯಾಬ್ ಪರೀಕ್ಷೆಯ ವರದಿ ದೃಢಪಡಿಸಿದೆ.

ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂಬುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ಕೂಡಾ ವಾದಿಸಿದ್ದರು. ಟಿಟಿಡಿ ಮಾಜಿ ಮುಖ್ಯಸ್ಥರು ಚಂದ್ರಬಾಬು ನಾಯ್ಡು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಎಚ್ಚರಿಕೆ ನೀಡಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುವುದು ಇದೀಗ ಲ್ಯಾಬ್ ವರದಿಯಲ್ಲಿ ಬಹಿರಂಗವಾಗಿದೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದವನ್ನು ತಯಾರಿಸಲು ಬಳಸುತ್ತಿದ್ದ ತುಪ್ಪದಲ್ಲಿ ಗೋಮಾಂಸ ಟ್ಯಾಲೋ ಮತ್ತು ಮೀನಿನ ಎಣ್ಣೆ ಸೇರಿದಂತೆ ಪ್ರಾಣಿಗಳ ಕೊಬ್ಬಿನ ಕುರುಹುಗಳಿವೆ ಎಂದು ವರದಿ ಬಹಿರಂಗಪಡಿಸಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Exit mobile version