SUDDIKSHANA KANNADA NEWS/ DAVANAGERE/ DATE:17-10-2023
ಗಿರೀಶ್ ಕೆ ಎಂ
ಕಳೆದ ಮೂರು ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಭಾರತೀಯ ಷೇರು ಮಾರುಕಟ್ಟೆ(Stock market)ಯಲ್ಲಿ ಇಂದು ಏರಿಕೆ ಕಂಡುಬಂದಿದೆ. ಜಾಗತಿಕ ಮಾರುಟ್ಟೆಯಲ್ಲಿನ ಸಕಾರಾತ್ಮಕ ಪ್ರತಿಕ್ರಿಯೆ, ವಿದೇಶಿ ಸಾಂಸ್ಥಿಕ ಹೂಡಿಕೆದಾರ ಖರೀದಿ ಮಾರುಕಟ್ಟೆಗೆ ಧನಾತ್ಮಕವಾಗಿ ಮುಕ್ತಾಯ ಗೊಳ್ಳಲು ಕಾರಣವಾಯಿತು.
READ ALSO THIS STORY:
ಇಸ್ರೇಲ್ (Israel) – ಹಮಾಸ್ ಯುದ್ಧಕ್ಕೆ ನಾಲ್ಕು ಸಾವಿರ ಜನರ ಸಾವು…!
ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್ಎಸ್ಇ) ನಿಫ್ಟಿ 79.75 (0.40%) ಅಂಕ ಏರಿಕೆ ಕಂಡು 19,811.50 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 261.16 (0.39%) ಅಂಕ ಏರಿಕೆ ಕಂಡು 66,428.09 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.
ಏರಿಕೆ ಕಂಡ ಷೇರುಗಳು:
ಇಂದು ನಿಫ್ಟಿಯಲ್ಲಿ BPCL, POWERGRID, COALINDIA, SBILIFE, HDFCLIFE ಷೇರುಗಳು ಜಿಗಿತ ಕಂಡವು.
ಇಳಿಕೆ ಕಂಡ ಷೇರುಗಳು:
ನಿಫ್ಟಿಯಲ್ಲಿ TATAMOTORS, LT, UPL, INDUSINDBK, TCS ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.
ಕರೆನ್ಸಿ ವಹಿವಾಟು:
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 83.25 ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.
FII ಮತ್ತು DII ನಗದು ವಹಿವಾಟು ವಿವರ:
ಇಂದಿನ ಮಾರುಕಟ್ಟೆಯ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ.263.68 ಕೋಟಿ ನಿವ್ವಳ ಖರೀದಿ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.112.55 ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.