SUDDIKSHANA KANNADA NEWS/ DAVANAGERE/ DATE:18-10-2023
ಗಿರೀಶ್ ಕೆ ಎಂ
ಜಾಗತಿಕ ಮಾರುಕಟ್ಟೆಯಲ್ಲಿನ ಋಣಾತ್ಮಕ ವಿದ್ಯಾಮಾನ, ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧ ಹಾಗೂ ಲಾಭಾಂಶ ಹಿತೆಗೆತದ ಕಾರಣಗಳಿಂದಾಗಿ ಭಾರತೀಯ ಷೇರುಪೇಟೆ (Stock market) ಋಣಾತ್ಮಕವಾಗಿ ಮುಕ್ತಾಯಗೊಳ್ಳಲು ಕಾರಣವಾಯಿತು.
Read Also This Story:
Bhadra Dam: ಭದ್ರಾಡ್ಯಾಂ ನೀರು ನಿಲುಗಡೆಗೆ ಆಕ್ರೋಶ:,ರೈತರ ಹಿಸಾಸಕ್ತಿ ಮರೆತ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು: ಭಾರತೀಯ ರೈತ ಒಕ್ಕೂಟ ಆರೋಪ
ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್ಎಸ್ಇ) ನಿಫ್ಟಿ -140.41 (-0.71%) ಅಂಕ ಇಳಿಕೆ ಕಂಡು 19,671.10 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ -551.07 (-0.82%) ಅಂಕ ಇಳಿಕೆ ಕಂಡು 65,877.02 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.
ಏರಿಕೆ ಕಂಡ ಷೇರುಗಳು:
ಇಂದು ನಿಫ್ಟಿಯಲ್ಲಿ CIPLA, DRREDDY, TATAMOTORS, SUNPHARMA, SBILIFE ಷೇರುಗಳು ಜಿಗಿತ ಕಂಡವು.
ಇಳಿಕೆ ಕಂಡ ಷೇರುಗಳು:
ನಿಫ್ಟಿಯಲ್ಲಿ BAJFINANCE, BAJAJFINSV, NTPC, HDFCBANK, RELIANCE ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.
ಕರೆನ್ಸಿ ವಹಿವಾಟು:
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 83.28 ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.
FII ಮತ್ತು DII ನಗದು ವಹಿವಾಟು ವಿವರ:
ಇಂದಿನ ಮಾರುಕಟ್ಟೆಯ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ.-1,831.84 ಕೋಟಿ ನಿವ್ವಳ ಮಾರಾಟ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.1,469.50 ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.