SUDDIKSHANA KANNADA NEWS/ DAVANAGERE/ DATE:03-10-2023
ಗಿರೀಶ್ ಕೆ ಎಂ
ಭಾರತೀಯ ಷೇರುಪೇಟೆ(Stock market)ಯಲ್ಲಿ ಅನಿಶ್ಚಿತತೆ ಮುಂದುವರೆದಿದ್ದು,ಇಂದು ಕುಸಿತ ಕಂಡಿದೆ. ಆಟೋ ವಲಯ, oil ಮತ್ತು gas, ಫಾರ್ಮಾ ವಲಯ, ಮೆಟಲ್ ವಲಯವಾರು ಷೇರುಗಳಲ್ಲಿ ಹೆಚ್ಚು ಮಾರಾಟದ ಒತ್ತಡಕ್ಕೆ ಒಳಗಾದವು.
Read Also This Story:
Davanagere: ನಾನೇನೂ ಮಂತ್ರಿಗಿರಿ ಕೇಳಿಲ್ಲ,ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದೇನೆ, ಸಿಎಂ ಸಿದ್ದರಾಮಯ್ಯ ಕರೆದಾಗ ಹೋಗಿ ಮಾತನಾಡುತ್ತೇನೆ: ಶಾಮನೂರು ಶಿವಶಂಕರಪ್ಪ
ದಿನದ ಅಂತ್ಯಕ್ಕೆ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ -109.55 (-0.56%) ಅಂಕ ಇಳಿಕೆ ಕಂಡು 19,528.75 ರಲ್ಲಿ ಮತ್ತು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ -316.31 (-0.48%) ಅಂಕ ಇಳಿಕೆ ಕಂಡು 65,512.10 ರಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದವು.
ಏರಿಕೆ ಕಂಡ ಷೇರುಗಳು:
ಇಂದು ನಿಫ್ಟಿಯಲ್ಲಿ BAJFINANCE,LT,TITAN,BAJAJFINSV,ADANIPORTS ಷೇರುಗಳು ಜಿಗಿತ ಕಂಡವು.
ಇಳಿಕೆ ಕಂಡ ಷೇರುಗಳು:
ನಿಫ್ಟಿಯಲ್ಲಿ ONGC, EICHERMOT, MARUTI,HINDALCO, DRREDDY ಷೇರುಗಳು ನಕಾರಾತ್ಮಕ ವಹಿವಾಟು ನಡೆಸಿದವು.
ಕರೆನ್ಸಿ ವಹಿವಾಟು:
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 83.21 ಕ್ಕೆ ತನ್ನ ವಹಿವಾಟು ಕೊನೆಗೊಳಿಸಿದೆ.
FII ಮತ್ತು DII ನಗದು ವಹಿವಾಟು ವಿವರ:
ಇಂದಿನ ಮಾರುಕಟ್ಟೆಯ ಅಂತ್ಯದಲ್ಲಿ ‘ವಿದೇಶಿ ಸಾಂಸ್ಥಿಕ ಹೂಡಿಕೆದಾರರು” (FII) : ರೂ. -2,034.14 ಕೋಟಿ ನಿವ್ವಳ ಮಾರಾಟ ಮಾಡಿದರೆ , ‘ದೇಶೀಯ ಸಾಂಸ್ಥಿಕ ಹೂಡಿಕೆದಾರರು’ (DII) ರೂ.1,361.02 ಕೋಟಿ ನಿವ್ವಳ ಖರೀದಿ ಮಾಡಿದ್ದಾರೆ.