SUDDIKSHANA KANNADA NEWS/ DAVANAGERE/ DATE:02-04-2024
ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ (CONGRESS) ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ (SHAMANURU SHIVASHANKARAPPA) ಹಾಗೂ ದಾವಣಗೆರೆ (DAVANAGERE) ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್. ಎಸ್. ಮಲ್ಲಿಕಾರ್ಜುನ್ (S. S. MALLIKARJUN) ಅವರು ಏಪ್ರಿಲ್ 3ರಿಂದ ಅಧಿಕೃತವಾಗಿ ಚುನಾವಣಾ (ELECTION) ಪ್ರಚಾರ ಶುರು ಮಾಡಲಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಆನೆಕೊಂಡದ ಶ್ರೀ ಬಸವೇಶ್ವರ ದೇವಸ್ಥಾನ ಹಾಗೂ ಬೆಳಿಗ್ಗೆ 11. 30ಕ್ಕೆ ಶಾಮನೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್ (S. S. MALLIKARJUN) ಅವರು ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಬಳಿಕ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಬರುವ ಮೇ.10ರಂದು ನಡೆಯಲಿರುವ ಕರ್ನಾಟಕ (KARNATAKA) ವಿಧಾನಸಭೆ ಚುನಾವಣೆಯ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಶಿವಶಂಕರಪ್ಪ ಹಾಗೂ ಉತ್ತರ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಲ್ಲಿಕಾರ್ಜಜುನ್ ಪ್ರಚಾರ ಕಾರ್ಯಕ್ಕೆ ವಾರ್ಡ್ ಅಧ್ಯಕ್ಷರು, ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮಾಜಿ ಸದಸ್ಯರು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಪಿಎಂಸಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಹಾಲಿ ಮತ್ತು ಮಾಜಿ ಸದಸ್ಯರು, ಜನಪ್ರತಿನಿಧಿಗಳು ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.