SUDDIKSHANA KANNADA NEWS/ DAVANAGERE/ DATE:17-08-2024
ದಾವಣಗೆರೆ: ದಾವಣಗೆರೆ ಜಿಲ್ಲೆಯ ಕುಸ್ತಿ ಖೇಲೋ ಇಂಡಿಯಾ ಕೇಂದ್ರಕ್ಕೆ ಅಂತರಾಷ್ಟ್ರೀಯ ಮಟ್ಟ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳನ್ನು ತರಬೇತುದಾರರಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಕುಸ್ತಿ ಕ್ರೀಡಾಪಟುಗಳು ಆಗಸ್ಟ್ 22ರ ಒಳಗಾಗಿ ಎಲ್ಲಾ ಅವಶ್ಯಕ ದಾಖಲೆಗಳ ದೃಢೀಕೃತ ಪ್ರತಿಗಳೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 08192-237480 ಗೆ ಕರೆ ಮಾಡಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಪ್ರಶಸ್ತಿಗೆ ಅರ್ಜಿ ಆಹ್ವಾನ:
ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಹಾಗೂ 10,000 ಸಾವಿರ ನಗದು ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಸೆ.18 ರ ಒಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಚೇರಿ, ಸರ್ಕಾರಿ ಬಾಲಕರ ಬಾಲಮಂದಿರ ಆವರಣ, ಎಂ.ಸಿ.ಸಿ. ಬಿ.ಬ್ಲಾಕ್ ಕುವೆಂಪು ನಗರ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ 08192-264056 ಸಂಖ್ಯೆಗೆ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ರಾಜಾನಾಯ್ಕ್ ತಿಳಿಸಿದ್ದಾರೆ.