Site icon Kannada News-suddikshana

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ವಿವಿಧ ತರಬೇತಿಗೆ ಅರ್ಜಿ ಆಹ್ವಾನ
*********************
ಮಡಿಕೇರಿ:-ಪ್ರಸಕ್ತ(2024-25) ಸಾಲಿನ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ನಿಗಮ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಮತ್ತು ಅವರ ಅವಲಂಬಿತ ಯುವಕ ಯುವತಿಯರಿಗೆ ಗ್ರಾಫಿಕ್ ಡಿಸೈನಿಂಗ್ ಮತ್ತು ವಿಡಿಯೋ ಎಡಿಟಿಂಗ್, ಸಾಫ್ಟ್‍ವೇರ್, ಮಲ್ಟಿಮಿಡಿಯಾ ಮತ್ತು ಇಲ್ಯೂಸ್ಟ್ರೇಷನ್ ಕೋರ್ಸ್‍ಗಳ ತರಬೇತಿ ನೀಡಲು ಕಾರ್ಯಕ್ರಮ ಹಮ್ಮಿಕೊಂಡಿದ್ದು, ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮತ್ತು ಅವರ ಅವಲಂಬಿತರ ಯುವಕ ಯುವತಿಯರು 18 ಮತ್ತು 35 ವಯಸ್ಸಿನರಾಗಿರಬೇಕು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ರ ಐಡಿ ಕಾರ್ಡ್ ಇರಬೇಕು.
ಆಸಕ್ತಿವುಳ್ಳ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಮತ್ತು ಅವರ ಅವಲಂಬಿತ ಯುವಕ, ಯುವತಿಯರು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್‍ಕೋರ್ಸ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲಾ ಕಚೇರಿಗೆ ದಾಖಲೆಗಳೊಂದಿಗೆ ಅರ್ಜಿಯನ್ನು ನವೆಂಬರ್, 30 ರೊಳಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Exit mobile version