ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಮತದಾರರ ಅಧಿಕಾರ ಯಾತ್ರೆ”ಗೆ ಭಾರೀ ಬೆಂಬಲ, ಬಿಜೆಪಿಗೆ ನಡುಕ: ಸೈಯದ್ ಖಾಲಿದ್ ಅಹ್ಮದ್

On: August 29, 2025 10:41 AM
Follow Us:
ನಡುಕ
---Advertisement---

SUDDIKSHANA KANNADA NEWS/ DAVANAGERE/DATE:29_08_2025

ದಾವಣಗೆರೆ: ಮತಗಳ್ಳತನದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ನಡೆಸುತ್ತಿರುವ ಮತದಾರರ ಅಧಿಕಾರ ಯಾತ್ರೆಗೆ ಭಾರೀ ಜನಸ್ಪಂದನೆ ಸಿಕ್ಕಿದ್ದು, ಬಿಜೆಪಿ ಮತ್ತು ಮೈತ್ರಿಕೂಟಕ್ಕೆ ನಡುಕ ಶುರುವಾಗಿದೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: “ಅಫ್ಜಲ್ ಗುರು ವಧೆ ಮಾಡುವ ಶಿವಾಜಿ ಮಹಾರಾಜರ ಪೋಸ್ಟರ್”: ತೆರವಿಗೆ ಪೊಲೀಸರು ಬರುತ್ತಿದ್ದಂತೆ ಮಟಿಕಲ್ ನಲ್ಲಿ ಉದ್ವಿಗ್ನ ವಾತಾವರಣ!

ಬಿಹಾರದ ಡರ್ಭಾಂಗದಲ್ಲಿ ಆಯೋಜಿಸಿದ್ದ ಮತದಾರರ ಅಧಿಕಾರ ಯಾತ್ರೆಯಲ್ಲಿ ಪಾಲ್ಗೊಂಡು ಭಾರತದ ಸಂವಿಧಾನವನ್ನು ಪ್ರದರ್ಶಿಸಿ ಮಾತನಾಡಿದ ಅವರು, ಬಿಹಾರದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತು ಅದರ ಮಿತ್ರಪಕ್ಷ ಮತ ಚೋರಿ ನಡೆಸಿದೆ. ರಾಜ್ಯಾದ್ಯಂತ ನಡೆಯುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯಲ್ಲಿ ಹೋದ ಕಡೆಗಳಲ್ಲಿ ಜನರಿಂದ ಭಾರೀ ಸ್ಪಂದನೆ ವ್ಯಕ್ತವಾಗುತ್ತಿದೆ. ಇದು ಬಿಜೆಪಿ ವಿರುದ್ಧದ ಜನಾಕ್ರೋಶಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಭಾರತದಲ್ಲಿ ಚುನಾವಣೆ ಪಾರದರ್ಶಕವಾಗಿ ನಡೆಯಬೇಕು. ಆದ್ರೆ, ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಅಣತಿಯಂತೆ ಕಾರ್ಯನಿರ್ವಹಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ವಾಮಮಾರ್ಗ, ಅಧಿಕಾರ ಬಳಸಿ ಬಿಜೆಪಿ ಗೆಲ್ಲುವುದಕ್ಕಷ್ಟೇ ಯೋಚನೆ ಮಾಡುತ್ತದೆಯೇ ಹೊರತು ಜನರ ಮತದಾನದ ಹಕ್ಕು ಸಿಗುವಂತಾಗಲು ಬಿಡುತ್ತಿಲ್ಲ. ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದ್ದು, ಇದು ಪಾರದರ್ಶಕವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈಗ ಬಿಹಾರ ಮಾತ್ರವಲ್ಲ, ದೇಶಾದ್ಯಂತ ಮತಗಳ್ಳತನದ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ. ಬಿಹಾರ ಸೇರಿದಂತೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಲಕ್ಷಾಂತರ ಮತದಾರರ ಮತ ಚೋರಿ ಮಾಡಲಾಗಿದೆ. ಇದು ದೇಶದ ಯುವಕರು, ಮಹಿಳೆಯರು, ಹಿರಿಯರಿಗೂ ಗೊತ್ತಾಗಿದೆ. ವಿಶೇಷ ತೀವ್ರ ಪರಿಷ್ಕರಣೆಯಲ್ಲಿನ ಅಕ್ರಮಗಳ ಆರೋಪದ ಕುರಿತಂತೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಬಿಹಾರದ ಜನರು ಬುದ್ಧಿವಂತರು ಮತ್ತು ಜಾಗರೂಕರಾಗಿದ್ದಾರೆ. “ರಾಜ್ಯದಲ್ಲಿ ಒಂದೇ ಒಂದು ಮತವನ್ನು ಸಹ ಕದಿಯಲು ಬಿಡುವುದಿಲ್ಲ” ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಆಗ್ರಹವೂ ಇದೆೇ ಆಗಿದೆ. ಬಿಹಾರ ಚುನಾವಣೆಯಲ್ಲಿ ಮತ ಕದಿಯಲು ಪ್ರಯತ್ನಿಸುತ್ತಿದ್ದಾರೆಂದು ನಮಗೆ ತಿಳಿದಿದೆ. ಅದಕ್ಕಾಗಿಯೇ ಮತದಾರರ ಅಧಿಕಾರ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ. ಜನರು ಸಹ ಜಾಗೃತರಾಗಬೇಕು. ತಮ್ಮ ಹಕ್ಕು ಚಲಾಯಿಸಲು ಮುಂದಾಗಬೇಕು. ಮತದಾನದಿಂದ ವಂಚಿತರಾಗಬಾರದು ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ನಾಗರಿಕನಿಗೂ ನೀಡಿರುವ ಸರ್ವಶ್ರೇಷ್ಠ ಹಕ್ಕು. ಈ ಹಕ್ಕು ಕಸಿಯುವಂತಾಗಲು ಬಿಡಬಾರದು. ಯುವಕರು ಮತ್ತು ವಿದ್ಯಾವಂತರು ಈ ನಿಟ್ಟಿನಲ್ಲಿ ಗಂಭೀರವಾಗಿ ಆಲೋಚಿಸಬೇಕಾಗಿದೆ. ಬಡವರ ಮತಗಳನ್ನು ಮಾತ್ರ ಕದಿಯುವ ಮೂಲಕ ಚುನಾವಣಾ ವ್ಯವಸ್ಥೆಗೆ ದ್ರೋಹ ಬಗೆಯುವಂತ ಕೆಲಸ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತಗಳು ಕಳ್ಳತನ ಆಗಿರುವ ಕುರಿತಂತೆ ಇದುವರೆಗೆ ಸ್ಪಷ್ಟನೆ ನೀಡಿಲ್ಲ. ಚುನಾವಣಾ ಆಯೋಗವು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಹೇಳಿದಂತೆ ಹೇಳುತ್ತಿದೆ. ಇದನ್ನು ಗಮನಿಸಿದರೆ ಮತ ಚೋರಿ ಆಗಿರುವುದು ಸತ್ಯ ಎಂಬುದು ಗೊತ್ತಾಗುತ್ತದೆ. ಈ ಕುರಿತಂತೆ ಸಮಗ್ರ ತನಿಖೆಯಾಗಬೇಕು. ದೇಶದ ಜನತೆಗೆ ಸ್ಪಷ್ಟನೆ ಸಿಗುವಂತಾಗಬೇಕು. ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ತಿಳಿಸಿದ್ದಾರೆ.

ರ್ಯಾಲಿಯಲ್ಲಿ ಆರ್ ಜೆ ಡಿ ಮುಖಂಡ ತೇಜಸ್ವಿ ಯಾದವ್, ಉದಯ ಭಾನು, ಕಾಂಗ್ರೆಸ್ ಮುಖಂಡರು, ಆರ್ ಜೆಡಿ ನಾಯಕರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment