Site icon Kannada News-suddikshana

ತ್ರಿಪುರಾ ಪ್ರವಾಹ – ರಕ್ಷಣಾ ಕಾರ್ಯಾಚರಣೆ ವೇಳೆ ಇಬ್ಬರು ಯೋಧರ ಪ್ರಾಣತ್ಯಾಗ

ಅಗರ್ತಲಾ: ತ್ರಿಪುರಾ ಪ್ರವಾಹಕ್ಕೆ ಸಿಲುಕಿದವರ ರಕ್ಷಿಸುವ ಸಂದರ್ಭದಲ್ಲಿ ಇಬ್ಬರು ವೀರ ಯೋಧರಾದ ಆಶಿಶ್ ಬೋಸ್ ಮತ್ತು ಚಿರಂಜಿತ್ ಡೇ ಅವರು ಪ್ರಾಣ ತ್ಯಾಗ ಮಾಡಿದ್ದಾರೆ.

ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್ಆರ್) ಯೋಧ ಸೇರಿದಂತೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರವಾಹದ ಅವಘಡಗಳಿಂದ 24 ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ನಿಸ್ವಾರ್ಥ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಮಾಣಿಕ್ ಸಹಾ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್‌ನಲ್ಲಿ ಬರೆದಿದ್ದಾರೆ.

Exit mobile version