SUDDIKSHANA KANNADA NEWS/ DAVANAGERE/ DATE:23_07_2025
ದಾವಣಗೆರೆ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದಲ್ಲಿ ಬುಧವಾರ ವಿದ್ಯುತ್ ಅವಘಡದಿಂದ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಅಣಬೇರು ಗ್ರಾಮದ ಇಬ್ಬರು ಮೃತಪಟ್ಟಿದ್ದಾರೆ.
ಈ ಸುದ್ದಿಯನ್ನೂ ಓದಿ: ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಮೆಕ್ಕೆಜೋಳ ವರ್ತಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಶಿವಾನಂದ ಪಾಟೀಲ!
ಈ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆ ಬಾಪೂಜಿ ಆಸ್ಪತ್ರೆಯ ಶವಾಗಾರದ ಬಳಿ ತೆರಳಿ ಘಟನೆ ಬಗ್ಗೆ ಮೃತಪಟ್ಟ ಕುಟುಂಬದವರಿಂದ ಮಾಹಿತಿ ಪಡೆದರು.
ಬುಧವಾರ ಬೆಳಗ್ಗೆಯಿಂದ ಕ್ಷೇತ್ರದ ಪ್ರವಾಸದಲ್ಲಿದ್ದ ಶಾಸಕರು, ವಿದ್ಯುತ್ ಅವಘಡದಿಂದ ಮೃತಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ದಾವಣಗೆರೆಗೆ ಧಾವಿಸಿದರು. ಬಾಪೂಜಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹಗಳನ್ನು ಇಟ್ಟಿದ್ದು, ಮೃತದೇಹಗಳ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಸಂಬಂಧಿಕರಿಗೆ ಹಸ್ತಾಂತರ ಮಾಡುವಂತೆ ಆಸ್ಪತ್ರೆಯ ಮುಖ್ಯಸ್ಥರಿಗೆ ಸೂಚಿಸಿದರು.
ಬಳಿಕ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.