Home ಕ್ರೈಂ ನ್ಯೂಸ್ ದಾವಣಗೆರೆಯ ಕುಂದುವಾಡ ಕೆರೆಯಲ್ಲಿ ಮುಳುಗಿ ಯುವಕರು ಸಾವು
ಕ್ರೈಂ ನ್ಯೂಸ್ದಾವಣಗೆರೆ

ದಾವಣಗೆರೆಯ ಕುಂದುವಾಡ ಕೆರೆಯಲ್ಲಿ ಮುಳುಗಿ ಯುವಕರು ಸಾವು

Share
ದಾವಣಗೆರೆ
Share

SUDDIKSHANA KANNADA NEWS/DAVANAGERE/DATE:25_11_2025

ದಾವಣಗೆರೆ: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ದುರ್ಮರಣಕ್ಕೀಡಾದ ಹೃದಯವಿದ್ರಾವಕ ಘಟನೆ ದಾವಣಗೆರೆಯ ಕುಂದುವಾಡ ಕೆರೆಯಲ್ಲಿ ನಡೆದಿದೆ.

READ ALSO THIS STORY: ಲೋಕಾಯುಕ್ತ ಬಲೆಗೆ ಬಿದ್ದ ಎಪಿಎಂಸಿ ಕೃಷಿ ಮಾರಾಟ ವಿಭಾಗದ ಸಹಾಯಕ ನಿರ್ದೇಶಕ!

ದಾವಣಗೆರೆ

ಶಾಂತಿನಗರದ ಚೇತನ್(22), ಮನು(23) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಇಬ್ಬರು ಯುವಕರ ಮೃತ ದೇಹ ಪತ್ತೆಯಾಗಿದೆ. ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತವೂ ಬೆಳೆದಿದೆ.

ಕಳೆದ ಎರಡು ದಿನದಿಂದ ಚೇತನ್ ಮತ್ತು ಮನು ನಾಪತ್ತೆಯಾಗಿದ್ದರು. ಕುಟುಂಬಸ್ಥರು ವಿವಿಧೆಡೆ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಸ್ನೇಹಿತರು, ಸಂಬಂಧಿಕರನ್ನೂ ವಿಚಾರಿಸಿದ್ದರು. ಇಬ್ಬರು ಯುವಕರು ಹೋಗುತ್ತಿದ್ದ ಸ್ಥಳಗಳಲ್ಲಿಯೂ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ.

ಆದರೆ ಇಂದು ಕುಂದುವಾಡ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದರು ಎಂಬ ಅನುಮಾನ ಇದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *