Site icon Kannada News-suddikshana

ಎರಡು ವರ್ಷಗಳ ಸರಣಿ ಸುಲಿಗೆ! ಯುಗಾದಿ ಹಬ್ಬಕ್ಕೆ ಬೆಲೆ ‘ಏರಿಕೆ ಹೋಳಿಗೆ!!’

SUDDIKSHANA KANNADA NEWS/ DAVANAGERE/ DATE:28-03-2025

ಬೆಂಗಳೂರು: ಎರಡು ವರ್ಷಗಳ ಸರಣಿ ಸುಲಿಗೆ, ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆ ಹೋಳಿಗೆ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಲೆ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಲು ಹಾಲಾಹಲ; 3ನೇ ಸಲ ದರ ಏರಿಕೆ! 2023 ಆಗಸ್ಟ್ ₹3, 2024 ಜೂನ್ ₹2, 2025 ಮಾರ್ಚ್, ಅಂದರೆ ಈಗ ₹4.ಜೊತೆಗೆ ವಿದ್ಯುತ್ ಶಾಕ್! ಈಗ ಎಲ್ಲರಿಗೂ ಪ್ರತೀ ಯೂನಿಟ್ಟಿಗೆ ₹36 ಪೈಸೆ ಬರೆ. ಮಹಾದೇವಪ್ಪನಿಗೂ ಶಾಕು! ಕಾಕಾ ಪಾಟೀಲಗೂ ಶಾಕು!! ಒಂದು ಕೈಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ದಶಾವತಾರಿ ರಾವಣರೂಪಿ ಸುಲಿಗೆ ಪ್ರವೃತ್ತಿ ಕನ್ನಡಿಗರ ಪಾಲಿಗೆ ಮರಣಶಾಸನ. ಹಾಲು, ವಿದ್ಯುತ್ ದರ ಏರಿಕೆ ಖಂಡನೀಯ. ನೆಪ ರೈತರದು, ಲಾಭ ಕೆಎಂಎಫ್ ಗೆ! ಕಂಪನಿ ಆಡಳಿತ ನಡೆಸುತ್ತಿದೆ ಸರಕಾರ! ಎಂದು ಕಿಡಿಕಾರಿದ್ದಾರೆ.

ಮೊಸರು ದರ ₹4 ಏರಿಕೆ ಮಾಡಿದ್ದೀರಿ. ಈ ಹಣ ಏನು ಮಾಡುತ್ತೀರಿ? ರೈತರಿಗೆ ವರ್ಗಾಯಿಸುತ್ತೀರೋ ಅಥವಾ ಕೆಎಂಎಫ್ ತಾನೇ ಉಳಿಸಿಕೊಳ್ಳಲಿದೆಯೋ? ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದ್ದಾರೆ.

ಇದು ಪ್ರಜಾಪ್ರಭುತ್ವ ಸರಕಾರವಲ್ಲ. ದರ ಏರಿಕೆ, ತೆರಿಗೆ ಹೇರಿಕೆ ಸರಕಾರ! ಇದು ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ! ಸುಲಿಗೆಯಷ್ಟೇ ನಿತ್ಯಕೃತ್ಯ. ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ. ಈಸ್ಟ್ ಇಂಡಿಯಾ ಕಾಂಗ್ರೆಸ್!! ಎಂದು ಟ್ವೀಟ್ ನಲ್ಲಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Exit mobile version