Home ಕ್ರೈಂ ನ್ಯೂಸ್ ಉದಯ್ ಭಾನು ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಕೇಂದ್ರದ ವಿರುದ್ಧ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಉದಯ್ ಭಾನು ಬಂಧನ ಪ್ರಜಾಪ್ರಭುತ್ವದ ಕಗ್ಗೊಲೆ: ಕೇಂದ್ರದ ವಿರುದ್ಧ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ

Share
ಪ್ರಜಾಪ್ರಭುತ್ವ
Share

ದಾವಣಗೆರೆ: ಭಾರತ್ ಮಂಟಪದಲ್ಲಿ ನಡೆದ ಭಾರತ್ AIಪ್ರಭಾವ ಶೃಂಗಸಭೆ 2026ರ ವೇಳೆ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಕಾರಣಕ್ಕೆ ರಾಷ್ಟ್ರೀಯ ಯುವ ಕಾಂಗ್ರೆಸ್ ಉದಯ್ ಭಾನು ಚಿಬ್ ಅವರ ಬಂಧನ ಖಂಡನೀಯ. ಕೇಂದ್ರ ಸರ್ಕಾರವು ಪ್ರಜಾಸತ್ತಾತ್ಮಕ ಹೋರಾಟ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವದ ವಿರೋಧಿ ನಡೆ

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಹೋರಾಟ ಮಾಡಿದರೆ ಬಂಧಿಸುವುದಲ್ಲದೇ, ಸೇಡಿನ ರಾಜಕಾರಣ ಮಾಡುತ್ತಿದೆ. ಸಮರ್ಪಕ ಉತ್ತರ ನೀಡದೇ ಹೇಡಿತನದಿಂದ ವರ್ತನೆ ಮಾಡಿರುವ ಕೇಂದ್ರ ಸರ್ಕಾರವು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧನದ ಮೂಲಕ ಹೆದರಿಸಲು ಸಾಧ್ಯವಿಲ್ಲ. ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಇಲಾಖೆಯ ಮೇಲೆ ಒತ್ತಡ:

ಉದಯ್ ಭಾನು ಸೇರಿದಂತೆ ಎಂಟು ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸುಮಾರು 15 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಬಂಧಿಸಿರುವ ದೆಹಲಿ ಪೊಲೀಸರು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಬೆಂಬಲ:

ಉದಯ್ ಭಾನು ಅವರ ಪರವಾಗಿ ದೇಶಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರು ಜೊತೆಗೆ ನಿಲ್ಲಲಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೂ ಸಹ ಯುವ ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ. ಬಂಧಿತರನ್ನು ಧೀರ ಸಿಂಹಗಳು ಎಂದು ಹೇಳಿದ್ದಾರೆ. ನಾವೆಲ್ಲರೂ ಉದಯ್ ಭಾನು ಅವರ ಪರವಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.

ಸೈಯದ್ ಖಾಲಿದ್ ಅಹ್ಮದ್ ಅವರ ಎಚ್ಚರಿಕೆ:

ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಮೆರಿಕಾ ಜೊತೆ ಮಾಡಿಕೊಂಡಿರುವ ಒಪ್ಪಂದವು ದೇಶಕ್ಕೆ ಮಾರಕವಾಗಲಿದೆ. ಎಐ ಶೃಂಗಸಭೆಯಲ್ಲಿ ಇದರ ವಿರುದ್ದ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡುವ ಸಲುವಾಗಿ ಬಂಧಿಸಲಾಗಿದೆ. ವಿಚಾರಣೆ ನೆಪದಲ್ಲಿ ಕರೆದೊಯ್ದು ಉದಯ್ ಭಾನು ಅವರನ್ನೂ ಬಂಧಿಸಿರುವುದು ನಾಚಿಕೆಗೇಡಿತನ ಸಂಗತಿ ಎಂದು ಕಿಡಿಕಾರಿದ್ದಾರೆ.

ಕೂಡಲೇ ಉದಯ್ ಭಾನು ಅವರನ್ನು ಬಿಡುಗಡೆ ಮಾಡಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೂ ವಿನಾಕಾರಣ ಬಂಧಿಸಿರುವುದು ಅಕ್ಷಮ್ಯ ಅಪರಾಧ. ಬಂಧಿತರ ಬಿಡುಗಡೆ ಆಗುವವರೆಗೆ ಹೋರಾಟ ನಡೆಸಲಾಗುವುದು ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಎಚ್ಚರಿಕೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *