Site icon Kannada News-suddikshana

ಪ್ರವಾಸಿಗರಿಗೆ ಗುಂಡಿಕ್ಕಿದ್ದ ಇಬ್ಬರು ಉಗ್ರರ ಮನೆ ಉಡೀಸ್…!

SUDDIKSHANA KANNADA NEWS/ DAVANAGERE/ DATE-25-04-2025

ಜಮ್ಮುಕಾಶ್ಮೀರದ ಪಹಲ್ಲಾಮ್ ನಲ್ಲಿ ಪ್ರವಾಸಿಗರ ಹಣೆಗೆ ಗುಂಡಿಕ್ಕಿದ ಇಬ್ಬರು ಭಯೋತ್ಪಾದಕರ ಮನೆ ಉಡೀಸ್ ಮಾಡಲಾಗಿದೆ. ಸೇನೆಯು ಕಾರ್ಯಾಚರಣೆ ನಡೆಸಿ ಮನೆ ಧ್ವಂಸಗೊಳಿಸಿದೆ.

ಲಷ್ಕರ್-ಎ-ತೈಬಾ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಸ್ಫೋಟಗಳಲ್ಲಿ ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆಗಳಲ್ಲಿ ಕೆಲವು ಸ್ಫೋಟಕಗಳನ್ನು ಇಡಲಾಗಿತ್ತು. ದಾಳಿ ನಡೆಸುತ್ತಿದ್ದಂತೆ ಮನೆ ಹೊತ್ತಿ ಉರಿದಿದೆ.

ಅನಂತನಾಗ್ ಜಿಲ್ಲೆಯ ಮೂಲದ ಥೋಕರ್ ಒಬ್ಬನಾಗಿದ್ದರೆ ಮತ್ತೊಬ್ಬ ಪುಲ್ವಾಮಾ ನಿವಾಸಿ ಶೇಖ್ ದಾಳಿಯ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕಿತ ಥೋಕರ್ ಮತ್ತು ಇತರ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು ಅನಂತನಾಗ್ ಪೊಲೀಸರು ಗುರುವಾರ ಬಿಡುಗಡೆ ಮಾಡಿದ್ದರು. ಇತರ ಇಬ್ಬರು ಶಂಕಿತರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರ ಬಂಧನಕ್ಕೆ ಕಾರಣವಾಗುವ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version