ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉಡುಪಿಯಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ, ಗ್ಯಾಂಗ್ ರೇಪ್- ಇಬ್ಬರ ಬಂಧನ

On: August 24, 2024 11:34 AM
Follow Us:
---Advertisement---

ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ. ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದನು. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರಿಗೆ ಹೇಳಿ ಬಿಯರ್ ಬಾಟಲಿ ತರಿಸಿದ್ದನು. ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಈ ವಿಚಾರ ತಿಳಿಯುತ್ತಿದ್ದಂತೆ ಕಾರ್ಕಳ ಠಾಣೆಯ ಸಮೀಪ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಈಗ ಮುಂದಾಗಿದ್ದಾರೆ.

ಸಂತ್ರಸ್ತೆ ಮತ್ತು ಆರೋಪಿ ಮೂರು ತಿಂಗಳಿಂದ ಇನ್‌ಸ್ಟಾಗ್ರಾಮ್‌ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಕಾರಿನಲ್ಲಿ ಅಪಹರಿಸಿದ್ದಾನೆ. ಈ ನಡುವೆ ಮದ್ಯಪಾನದಲ್ಲಿ ಏನೋ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್ ಹೇಳಿದ್ದಾರೆ.

ಮಾದಕ ಪದಾರ್ಥ ನೀಡಿ ಹಿಂದೂ ಯುವತಿಯ ರೇಪ್ ಎಸಗಿದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ತಾಫ್ & ಇಬ್ಬರ ವಿರುದ್ಧ ಕಾರಿನಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ರೇಪ್ ಮಾಡಿದ ಆರೋಪ ಪ್ರಕರಣ ದಾಖಲಾಗಿದೆ. ನಿನ್ನೆ ಮಧ್ಯಾಹ್ನ ಆಕೆಯನ್ನು ಕರೆದೊಯ್ದಿದ್ದ ಅಲ್ತಾಫ್, ಮಾದಕ ಪಾನೀಯ ಕುಡಿಸಿ ಮತ್ತು ಬರಿಸಿ ಸಂಜೆಯವರೆಗೆ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪಾಕಿಸ್ತಾನ

ಶಾಶ್ವತ ಕದನ ವಿರಾಮ ಚೆಂಡು ‘ಅಫ್ಘಾನ್ ತಾಲಿಬಾನ್ ಅಂಗಳದಲ್ಲಿ’: ಪಾಕಿಸ್ತಾನ ಪಿಎಂ ಶೆಹಬಾಜ್ ಷರೀಫ್!

ಆರ್‌ಎಸ್‌ಎಸ್

ಸರ್ಕಾರಿ ಆವರಣದಲ್ಲಿ ಆರ್‌ಎಸ್‌ಎಸ್, ರಾಜಕೀಯ, ಧಾರ್ಮಿಕ ಕಾರ್ಯಕ್ರಮ ತಡೆಗೆ ಮಸೂದೆ: ಕೈ ಮಾಸ್ಟರ್ ಪ್ಲ್ಯಾನ್ ಏನು?

ಅಬಕಾರಿ

4.42 ಕೆಜಿ ಚಿನ್ನ, 7.3 ಕೆಜಿ ಬೆಳ್ಳಿ, 1 ಕೋಟಿ ನಗದು, ಐಷಾರಾಮಿ ಕಾರುಗಳು ಪತ್ತೆ: ನಿವೃತ್ತ ಅಬಕಾರಿ ಅಧಿಕಾರಿ ಅಕ್ರಮ ಸಂಪತ್ತು 18 ಕೋಟಿ ರೂ.ಗೂ ಹೆಚ್ಚು!

KC Veerendra

ಬೆಳಕಿನ ಹಬ್ಬದ ವೇಳೆಯಲ್ಲೂ ಬರಲಲ್ಲ ಬೆಳಕು, ಕತ್ತಲಲ್ಲಿ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ: ಚಿತ್ರದುರ್ಗ ಕಾಂಗ್ರೆಸ್ ಶಾಸಕನಿಗೆ ಶಾಕ್ ಮೇಲೆ ಶಾಕ್!

ಪಾಕಿಸ್ತಾನ

ಅಫ್ಘಾನಿಸ್ತಾನ – ಪಾಕಿಸ್ತಾನ ನಡುವಿನ ಘರ್ಷಣೆ: 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ!

ದಂಪತಿ

ಪಾಸ್‌ಪೋರ್ಟ್‌ಗೆ ಗ್ಯಾಂಗ್‌ಸ್ಟರ್ ದಂಪತಿ ಜಗಳ: ಮಗಳ ಎದುರೇ ಪತ್ನಿಗೆ ಗುಂಡಿಕ್ಕಿ ಕೊಂದ ಪತಿ!

Leave a Comment