Site icon Kannada News-suddikshana

ಉಡುಪಿ: ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು..!

ಉಡುಪಿ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮೂಡಬಳ್ಳೆಯಲ್ಲಿ ನಡೆದಿದೆ. ಮೂಡುಬೆಳ್ಳೆ ಸಂತ ಲಾರೆನ್ಸ್‌ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ – ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

Exit mobile version